Friday, September 20, 2024

ಪ್ರಾಯೋಗಿಕ ಆವೃತ್ತಿ

ಹೈಕೋರ್ಟ್ ನ್ಯಾಯಾಧೀಶರ ಪಾಕಿಸ್ತಾನ ಹೇಳಿಕೆ| ‘ಸುಪ್ರೀಂ’ನಿಂದ ಸ್ವಯಂ ಪ್ರೇರಿತ ಪ್ರಕರಣ ದಾಖಲು

ಪ್ರಕರಣವೊಂದರ ವಿಚಾರಣೆ ವೇಳೆ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ವಿಡಿಯೋ ಕ್ಲಿಪ್‌ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಸ್ವಯಂಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿದ್ದು, ಹೈಕೋರ್ಟ್‌ಗೆ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿಆರ್ ಗವಾಯಿ, ಸೂರ್ಯಕಾಂತ್ ಮತ್ತು ಹೃಷಿಕೇಶ್ ರಾಯ್ ಅವರನ್ನೊಳಗೊಂಡ ಐವರು ನ್ಯಾಯಾಧೀಶರ ಪೀಠ ಇಂದು (ಸೆ.20) ಬೆಳಿಗ್ಗೆ ಸಭೆ ಸೇರಿದ ಬಳಿಕ, ಕರ್ನಾಟಕ ಹೈಕೋರ್ಟ್‌ನಿಂದ ವರದಿ ಕೋರಿ ಆದೇಶ ಹೊರಡಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಹೈಕೋರ್ಟ್ ನ್ಯಾಯಾಧೀಶರಾದ ವೇದವ್ಯಾಸಾಚಾರ್ ಶ್ರೀಶಾನಂದ ಅವರ ಹೇಳಿಕೆಯ ಎರಡು ವಿಡಿಯೋ ತುಣುಕುಗಳು ಕೆಳ ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಅವುಗಳಲ್ಲಿ ನ್ಯಾಯಾಧೀಶರು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿರುವುದು ಇದೆ. ಒಂದು ವಿಡಿಯೋದಲ್ಲಿ ನ್ಯಾಯಾಧೀಶರು ಬೆಂಗಳೂರಿನ ಮುಸ್ಲಿಂ ಬಾಹುಳ್ಯದ ಪ್ರದೇಶದ ಗೋರಿಪಾಳ್ಯವನ್ನು ‘ಪಾಕಿಸ್ತಾನ’ ಎಂದು ಉಲ್ಲೇಖಿ ನೋಡಬಹುದು. ಮತ್ತೊಂದು ವಿಡಿಯೋದಲ್ಲಿ ಅವರು ಮಹಿಳಾ ವಕೀಲರಿಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವುದು ಕಂಡುಬಂದಿದೆ.

“ನಾವು ಕೆಲವು ಮೂಲಭೂತ ಮಾರ್ಗಸೂಚಿಗಳನ್ನು ರೂಪಿಸಬಹುದು ಮತ್ತು ಹೈಕೋರ್ಟ್‌ನ ಪ್ರಧಾನ ಕಾರ್ಯದರ್ಶಿಯಿಂದ ವರದಿ ಕೇಳಬಹುದು” ಎಂದು ಸಿಜೆಐ ಚಂದ್ರಚೂಡ್ ಅವರು ಅಟಾರ್ನಿ ಜನರಲ್ (ಎಜಿ) ಆರ್ ವೆಂಕಟರಮಣಿ ಅವರಿಗೆ ಹೇಳಿದ್ದಾರೆ.

“ಸಾಮಾಜಿಕ ಮಾಧ್ಯಮದ ಈ ಯುಗದಲ್ಲಿ, ನಮ್ಮನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತದೆ. ನಾವು ಅದಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು” ಎಂದು ಸಿಜೆಐ ತಿಳಿಸಿದ್ದಾರೆ.

ಪ್ರಮುಖ ವಕೀಲರು ಸೇರಿದಂತೆ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಹೈಕೋರ್ಟ್ ನ್ಯಾಯಾಧೀಶರು ಲೈವ್‌ಸ್ಟ್ರೀಮ್‌ನಲ್ಲಿ ನೀಡಿರುವ ಎರಡು ಆಕ್ಷೇಪಾರ್ಹ ಹೇಳಿಕೆಗಳನ್ನು ಖಂಡಿಸಿದ್ದಾರೆ. ಆ ಎರಡು ಹೇಳಿಕೆಗಳನ್ನು ಕೆಳಗೆ ಗಮನಿಸಬಹುದು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!