ಮಂಡ್ಯ ಜಿಲ್ಲಾಸ್ಪತ್ರೆ (ಮಿಮ್ಸ್) ಯಲ್ಲಿ ಸಾರ್ವಜನಿಕ ಉಪಯೋಗಕ್ಕಾಗಿ ₹40 ಲಕ್ಷ ರೂ. ವೆಚ್ಚದ ಹೈಟೆಕ್ ಸ್ಕ್ಯಾನಿಂಗ್ ಯಂತ್ರವನ್ನು ಮಂಡ್ಯ ಶಾಸಕ ರವಿಕುಮಾರ್ ಗಣಿಗ ಬುಧವಾರ ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲಾಸ್ಪತ್ರೆಯು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ, ಈ ಕಾರಣಕ್ಕಾಗಿ ರಾಮನಗರ, ಚನ್ನಪಟ್ಟಣ, ಕೊಳ್ಳೇಗಾಲ ಹಾಗೂ ಮಾಗಡಿ ಸೇರಿದಂತೆ 4 ಜಿಲ್ಲೆಗಳ ರೋಗಿಗಳು ಇಲ್ಲಿ ಬಂದು ಚಿಕಿತ್ಸೆ ಪಡೆಯುತ್ತಾರೆ. ಹಾಗಾಗಿ ಆಸ್ಪತ್ರೆಗೆ ಇನ್ನಷ್ಟು ಸೌಲಭ್ಯಗಳನ್ನು ಒದಗಿಸಲು ಸಿದ್ದರಾಗಿದ್ಧೇವೆ ಎಂದರು.
ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇದ್ದು, ಅದನ್ನು ಸರಿಪಡಿಸಲು ಸಭೆ ಕರೆ ಚರ್ಚೆ ನಡೆಸಲಾಗುವುದು ಎಂದರು.




