ಮಂಡ್ಯ ತಾಲ್ಲೂಕಿನ ಬಸರಾಳು ಗ್ರಾಮದಲ್ಲಿರುವ ಶ್ರೀಕಾಲಭೈರವೇಶ್ವರ ದೇವಾಲಯದ ಆವರಣದಲ್ಲಿ ಬೃಹತ್ ಹೆಮಾಸ್ಟ್ ಲೈಟ್ ಅನ್ನು ಜೆಡಿಎಸ್ ಮುಖಂಡರು ಉದ್ಘಾಟಿಸಿದರು.
ಮಂಡ್ಯ ಜಿಲ್ಲೆ ಸಂಸದ ಹಾಗೂ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿರವರ ಸಹಕಾರದಿಂದ ಸಿ ಆರ್ ಎಫ್ ಅನುದಾನದಲ್ಲಿ ಹೈಮಾಸ್ಟ್ ಲೈಟ್ ಹಾಕಲಾಗಿದೆ.ಇದಕ್ಕೆ ಕಾರಣರಾದ ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ಮುಖಂಡರು ಧನ್ಯವಾದ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಡಿ.ರಮೇಶ್, ಮುಖಂಡರಾದ ಬಿ.ಆರ್. ರಾಮಚಂದ್ರು, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ತಿಮ್ಮೇಗೌಡ, ಮುಖಂಡರಾದ ಕೆಂಚನಹಳ್ಳಿ ಪುಟ್ಟಸ್ವಾಮಿ,ಬಿಡದಿ ಬಸವರಾಜು ಸೇರಿದಂತೆ ಬಸರಾಳು ಹಾಗೂ ಅಕ್ಕಪಕ್ಕದ ಗ್ರಾಮಸ್ಥರು ಉಪಸ್ಥಿತರಿದ್ದರು.




