Friday, November 20, 2026

ಪ್ರಾಯೋಗಿಕ ಆವೃತ್ತಿ

ಹರಿಯಾಣ | ಭಾರತ್ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಶವವಾಗಿ ಪತ್ತೆ

ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರೊಂದಿಗೆ ʻಭಾರತ್‌ ಜೋಡೋʼ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್‌ ಕಾರ್ಯಕರ್ತೆ ಹರಿಯಾಣದ ರೋಹ್ಟಕ್‌ ಜಿಲ್ಲೆಯ ಬಸ್‌ ನಿಲ್ದಾಣದ ಬಳಿ ಶವವಾಗಿ ಪತ್ತೆಯಾಗಿದ್ದಾರೆ.

“>

 

ಬಸ್‌ ನಿಲ್ದಾಣದ ಬಳಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಹಿಮಾನಿ ನರ್ವಾಲ್‌ (22) ಎಂದು ಗುರುತಿಸಲಾಗಿದೆ. ಸಾವಿನ ಕುರಿತು ಉನ್ನತಮಟ್ಟದ ತನಿಖೆಗೆ ಕಾಂಗ್ರೆಸ್‌ ಆಗ್ರಹಿಸಿದೆ.

ಸಂಪ್ಲಾ ಬಸ್‌ ನಿಲ್ದಾಣದ ಬಳಿ ದಾರಿಹೋಕರು ಸೂಟ್‌ಕೇಸ್‌ ಇರುವುದನ್ನು ಗಮನಿಸಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ವಿಧಿವಿಜ್ಞಾನ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಸೂಟ್‌ಕೇಸ್‌ನಲ್ಲಿ ಶವ ಇರುವುದನ್ನು ಪತ್ತೆಹಚ್ಚಿದ್ದಾರೆ. ಶವವನ್ನು ಹೊರತೆಗೆದಾಗ ಕುತ್ತಿಗೆ ಭಾಗಕ್ಕೆ ದುಪ್ಪಟ್ಟಾದಿಂದ ಬಿಗಿದು ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸದ್ಯ ಆಕೆಯ ಶವವನ್ನ ಮರಣೋತ್ತರ ಪರೀಕ್ಷೆಗಾಗಿ ರೋಹ್ಟಕ್ ಪಿಜಿಐಎಂಎಸ್‌ಗೆ ರವಾನಿಸಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ