Friday, September 20, 2024

ಪ್ರಾಯೋಗಿಕ ಆವೃತ್ತಿ

ಹಿಂದಿ ದಿವಸ ಆಚರಣೆ ಮಾಡಬಾರದು:ಎಚ್ಡಿಕೆ

ಸೆಪ್ಟೆಂಬರ್ 14 ರಂದು ಭಾರತ ಒಕ್ಕೂಟ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮವಾದ ಹಿಂದಿ ದಿವಸವನ್ನು ರಾಜ್ಯದಲ್ಲಿ ಆಚರಣೆ ಮಾಡಬಾರದೆಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಭಾರತವು ಸಾವಿರಾರು ಭಾಷೆ ಹಾಗೂ ಉಪ ಭಾಷೆಗಳನ್ನು ಒಳಗೊಂಡ, 560 ಕ್ಕೂ ಹೆಚ್ಚು ಸಂಸ್ಥಾನಗಳು ಒಪ್ಪಿ ಸೇರಿದ ಸಾಮಾಜಿಕ, ಸಾಂಸ್ಕೃತಿಕವಾಗಿ ಭಿನ್ನ ಆಚರಣೆಗಳನ್ನು ಹೊಂದಿರುವ ಒಂದು ಮಹಾನ್ ಒಕ್ಕೂಟವಾಗಿದೆ. ಇಂತಹ ನಾಡಿನಲ್ಲಿ ಕೇವಲ ಒಂದು ಭಾಷೆಯನ್ನು ಮಾತ್ರವೇ ಮೆರೆಸುವುದು ನಿಜಕ್ಕೂ ಜನತೆಗೆ ಎಸಗುವ ಪರಮ ಅನ್ಯಾಯವಾಗಿದೆ.

ಸೆಪ್ಟೆಂಬರ್ 14 ರಂದು ಭಾರತ ಒಕ್ಕೂಟ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮವಾದ ಹಿಂದಿ ದಿವಸವನ್ನು ಕರ್ನಾಟಕದಲ್ಲಿ ಒತ್ತಾಯಪೂರ್ವಕವಾಗಿ ಆಚರಿಸುವುದು ರಾಜ್ಯ ಸರ್ಕಾರ ಕನ್ನಡಿಗರಿಗೆ ಮಾಡುವ ಅನ್ಯಾಯವಾಗಿದೆ. ನಮ್ಮ ರಾಜ್ಯದ ಜನತೆಯ ತೆರಿಗೆ ಹಣದಲ್ಲಿ ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಹಿಂದಿ ದಿವಸ ಆಚರಣೆ ಮಾಡಬಾರದೆಂದು ಆಗ್ರಹಿಸುತ್ತೇನೆ ಎಂದು ತಮ್ಮ ಪತ್ರದಲ್ಲಿ ಬರೆದಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!