Thursday, September 19, 2024

ಪ್ರಾಯೋಗಿಕ ಆವೃತ್ತಿ

ಹಿಂದಿ ಹೇರಿಕೆ ಕನ್ನಡಕ್ಕೆ ಮಾರಕ : ಕರವೇ

ಕೇಂದ್ರ ಸರ್ಕಾರವು ಹಿಂದಿಯನ್ನು ಹೇರಿಕೆ ಮಾಡಿ, ಕನ್ನಡ ಸೇರಿದಂತೆ ಇತರೆ ಪ್ರಾದೇಶಿಕ ಭಾಷೆಗಳನ್ನು ನಾಶ ಮಾಡಲು ಹೊರಟಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ)ಕಾರ್ಯಕರ್ತರು ಮಂಡ್ಯನಗರದ ಮುಖ್ಯ ಅಂಚೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿ, ಭಾರತದ ಐಕ್ಯತೆಯನ್ನು ಒಡೆಯುತ್ತಿರುವ ಹಿಂದಿ ದಿವಸ ಆಚರಣೆಯನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಭಾರತ ಸರ್ಕಾರವು ಪ್ರತಿವರ್ಷ ಸೆಪ್ಟೆಂಬರ್ 14 ರಂದು ನಮ್ಮ ತೆರಿಗೆ ಹಣದಲ್ಲಿ ‘ಹಿಂದಿ ದಿವಸ’ ಆಚರಣೆ ನಡೆಸುತ್ತ ಬಂದಿದೆ. ಕೇವಲ ಹಿಂದಿ ದಿವಸವೊಂದನ್ನು ಆಚರಿಸುವ ಮೂಲಕ ದೇಶದ ಇತರೆ ಎಲ್ಲಾ ಭಾಷೆಗಳನ್ನು ಕಡೆಗಣಿಸಿ, ಹಿಂದಿಯೊಂದನ್ನೇ ಮೆರೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ನೇತೃತ್ವದಲ್ಲಿ ಇದನ್ನು ಕಳೆದ ಎರಡು ದಶಕಗಳಿಂದ ತೀವ್ರವಾಗಿ ವಿರೋಧಿಸುತ್ತ ಬಂದಿದ್ದೇವೆ,  ಕೇಂದ್ರ ಸರ್ಕಾರವು, ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳನ್ನು ಮಾತ್ರವೇ ತನ್ನ ಆಡಳಿತ ಭಾಷೆಗಳನ್ನಾಗಿ ಮಾಡಿಕೊಂಡಿರುವುದರಿಂದ, ದೇಶದ ಇತರ ಭಾಷೆಗಳ ಭಾಷಿಕರಿಗೆ ಕಲಿಕೆ, ಪ್ರವೇಶ ಪರೀಕ್ಷೆಗಳು, ಉದ್ಯೋಗ ನೇಮಕಾತಿ, ಸಾರ್ವಜನಿಕ ಸೇವೆಗಳಲ್ಲಿ ಬಹಳ ಅನಾನುಕೂಲವಾಗಿದೆ ಎಂದು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ಕರವೇ ಪದಾಧಿಕಾರಿಗಳಾದ ಚಿದಂಬರ್, ಶಂಕರೇಗೌಡ, ಉಮಾಶಂಕರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

 

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!