Thursday, November 19, 2026

ಪ್ರಾಯೋಗಿಕ ಆವೃತ್ತಿ

ಫೆಂಗಲ್ ಚಂಡಮಾರುತ | ಡಿ.3ರಂದು ಮಂಡ್ಯದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಫೆಂಗಲ್ ಚಂಡಮಾರುತದಿಂದ ಎಲ್ಲೆಡೆ ಮಳೆ ಸುರಿಯುತ್ತಿರುವುದರಿಂದ ನಾಳೆ (ಡಿ.3)ಯೂ ಕೂಡ ಮಂಡ್ಯ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ.ಕುಮಾರ ಆದೇಶ ಹೊರಡಿಸಿದ್ದಾರೆ.

ಎಲ್ಲಾ ತಾಲ್ಲೂಕುಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ ಹಾಗೂ ಡಿ.3ರಂದು ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿರುವುದರಿಂಧ ರಜೆ ಘೋಷಣೆ ಮಾಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿರಂತರ ಮಳೆಯ ಹಿನ್ನಲೆಯಲ್ಲಿ ಡಿಸೆಂಬರ್ 3 ರಂದು ಮಂಡ್ಯ ಜಿಲ್ಲೆಯ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( 2nd ಪಿ.ಯುಸಿ ವರೆಗೆ) ರಜೆ ದೊರೆಯಲಿದೆ. ಈ ರಜೆಯು ಜಿಲ್ಲೆಯ ಸರ್ಕಾರಿ, ಖಾಸಗಿ ಅನುದಾನಿತ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( ಎರಡನೇ ಪಿಯುಸಿ) ವರೆಗೆ ಅನ್ವಯವಾಗುತ್ತದೆ. ಈ ರಜಾ ದಿನದ ಕಲಿಕಾ ಪ್ರಕ್ರಿಯೆಯನ್ನು ಮುಂದಿನ ಸರ್ಕಾರಿ ರಜೆ ದಿನಗಳಲ್ಲಿ ಸರಿದೂಗಿಸುವಂತೆ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ