Friday, September 20, 2024

ಪ್ರಾಯೋಗಿಕ ಆವೃತ್ತಿ

ಪರಪ್ಪನ ಅಗ್ರಹಾರ ಸೇರಿದ ಪವಿತ್ರ ಗೌಡ; ದರ್ಶನ್ ಗೆ ಮತ್ತೇ ಪೊಲೀಸ್ ಕಸ್ಟಡಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಪೈಕಿ ಏಳು ಮಂದಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ.

ಚಿತ್ರ ನಟ ದರ್ಶನ್ ಸೇರಿದಂತೆ 6 ಮಂದಿ ಆರೋಪಿಗಳನ್ನು ಮತ್ತೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪವಿತ್ರ ಗೌಡ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿರುವುದರಿಂದ ಜೈಲು ಸೇರಲಿದ್ದಾರೆ.

ನಟ ದರ್ಶನ್, ನಟಿ ಪವಿತ್ರ ಗೌಡ ಸೇರಿದಂತೆ ಪೊಲೀಸ್ ಕಸ್ಟಡಿಯಲ್ಲಿದ್ದ ಎಲ್ಲ ಆರೋಪಿಗಳನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಎ-2 ಆರೋಪಿಯಾಗಿರುವ ದರ್ಶನ್ ಮತ್ತು ಇತರ ಐವರ ವಿಚಾರಣೆ ಅಗತ್ಯವಿರುವುದರಿಂದ ಸರ್ಕಾರಿ ಅಭಿಯೋಜಕರ ವಿನಂತಿಯ ಮೇರೆಗೆ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಆರೋಪಿಗಳಾದ ವಿನಯ್, ಪ್ರದೋಷ್, ನಾಗರಾಜ್, ಲಕ್ಷ್ಮಣ್ ಮತ್ತು ಧನರಾಜ್‌ ಮತ್ತೆ ಪೊಲೀಸ್‌ ಕಸ್ಟಡಿಯಲ್ಲಿ ದರ್ಶನ್‌ ಅವರೊಂದಿಗೆ ವಿಚಾರಣೆ ಎದುರಿಸಲಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!