Tuesday, November 24, 2026

ಪ್ರಾಯೋಗಿಕ ಆವೃತ್ತಿ

ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ – ಸಾಧಕರಿಗೆ ಸನ್ಮಾನ

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಮೈಸೂರು, ಮಂಡ್ಯ, ಚಾಮರಾಜಪೇಟೆ, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಕಳೆದ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮೊದಲ ಮೂರು ಸ್ಥಾನಗಳನ್ನು ಪಡೆದ ವಿಪ್ರ ವಿದ್ಯಾರ್ಥಿಗಳಿಗೆ ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಫೆ.7ರಂದು ಸಂಜೆ 4 ಗಂಟೆಗೆ ಮಂಡ್ಯನಗರದ ಬಂದೀಗೌಡ ಬಡಾವಣೆಯ ಗಾಯತ್ರಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಡಾ.ವಿ. ಭಾನುಪ್ರಕಾಶ್ ಶರ್ಮ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಎಸ್.ಸಚ್ಚಿದಾನಂದಮೂರ್ತಿ ಸಮಾರಂಭ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಬ್ರಾಹ್ಮಣ ಸಭಾದ ವಿಶ್ರಾಂತ ಅಧ್ಯಕ್ಷ ಬೆಳ್ಳೂರು ಎಸ್ ಶಿವರಾಂ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಜಿಲ್ಲಾ ಬ್ರಾಹ್ಮಣ ಸಭಾದ ಅಧ್ಯಕ್ಷ ಎಸ್.ಶಂಕರನಾರಾಯಣ ಶಾಸ್ತ್ರಿ ಅಧ್ಯಕ್ಷತೆ ವಹಿಸುವರು ಎಂದರು.

ಗೋಷ್ಠಿಯಲ್ಲಿ ಮುಖಂಡರಾದ ಬೆಳ್ಳೂರು ಶಿವರಾಮ್, ಶಂಕರ ನಾರಾಯಣ ಶಾಸ್ತ್ರಿ, ಪ್ರಭಾಕರ್, ಗೋಪಾಲ್, ಮಮತಾ ಹಾಗೂ ಬಿ.ಜಿ.ಉಮಾ ಮತ್ತಿತರರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ