Wednesday, September 11, 2024

ಪ್ರಾಯೋಗಿಕ ಆವೃತ್ತಿ

ಪ್ರಜಾಪ್ರಭುತ್ವಕ್ಕಾಗಿ ಹೋರಾಟ ನಡೆಸಬೇಕಾದ ಪರಿಸ್ಥಿತಿ ಬಂದಿದೆ

ಬಿಜೆಪಿ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ರಾಹುಲ್ ಗಾಂಧಿ ವಿರುದ್ಧ ಕಿರುಕುಳ ನೀಡುತ್ತಿದ್ದು, ದೇಶದಲ್ಲಿ ಪ್ರಜಾಪ್ರಭುತ್ವ ಉಳಿಸಲು ಹೋರಾಟ ಮಾಡ ಬೇಕಾದ ಪರಿಸ್ಥಿತಿ ಬಂದಿದೆ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನ್ಯಾಷನಲ್ ಹೆರಾಲ್ಡ್ ಪ್ರಕರಣ 2015ರಲ್ಲಿ ನ್ಯಾಯಾಲಯದಲ್ಲಿ ಮುಕ್ತಾಯಗೊಂಡಿದೆ.ಹೀಗಿದ್ದರೂ 2014ರಿಂದ ಪ್ರಧಾನಿ ಮೋದಿ ಹಾಗೂ ಅಮಿತ್ ಷಾ ಸುಮ್ಮನಿದ್ದು, ಚುನಾವಣೆಗೆ ಎರಡು ವರ್ಷ ಇರುವಾಗ ಈ ಪ್ರಕರಣವನ್ನು ಮುಂದಿಟ್ಟುಕೊಂಡು ರಾಹುಲ್ ಗಾಂಧಿಯವರಿಗೆ ಕಿರುಕುಳ ನೀಡಲು ಹೊರಟಿದ್ದಾರೆ. ಕಳೆದ 75 ವರ್ಷಗಳಲ್ಲಿ ಸಂವಿಧಾನ, ಪ್ರಜಾಪ್ರಭುತ್ವ ದುರುಪಯೋಗಪಡಿಸಿಕೊಂಡಿರುವ ಏಕೈಕ ಪಕ್ಷ ಬಿಜೆಪಿ ಎಂದು ಕಿಡಿಕಾರಿದರು.

ಅಮಿತ್ ಶಾ ಈ ದೇಶದ ಗೃಹ ಸಚಿವ ಯಾಗಿರುವುದು ನಮ್ಮ ದೌರ್ಭಾಗ್ಯ. ಸ್ವಾತಂತ್ರ್ಯ ಹೋರಾಟಗಾರರು ಸೇರಿ ಪ್ರಾರಂಭಿಸಿದ ಎಜೆಎಲ್ ಸಂಸ್ಥೆ ಆರ್ಥಿಕ ನಷ್ಟ ಅನುಭವಿಸಿದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಆರ್ಥಿಕ ಸಹಾಯ ನೀಡಿದೆ.ನಂತರದ ದಿನಗಳಲ್ಲಿ ಸಂಸ್ಥೆಯಿಂದ ಯಂಗ್ ಇಂಡಿಯಾ ಸಂಸ್ಥೆ ಪತ್ರಿಕೆ ನಡೆಸುತ್ತಿದೆ. ಪ್ರಕರಣದಲ್ಲಿ ತನಿಖೆಗೆ ಅಗತ್ಯವಾದ ಸತ್ಯಾಂಶ ಇಲ್ಲದಿದ್ದರೂ ಬಿಜೆಪಿ ಪಕ್ಷ ರಾಜಕೀಯ ಕಾರಣಕ್ಕಾಗಿ ಕಿರುಕುಳ ನೀಡುತ್ತಿರುವುದು ಸರಿಯಲ್ಲ ಎಂದರು.

ಒಗ್ಗಟ್ಟಿನ ಗೆಲುವು

ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಮಧು ಜಿ. ಮಾದೇಗೌಡರು ಗೆಲುವು ನಾಲ್ಕು ಜಿಲ್ಲೆಗಳ ಕಾಂಗ್ರೆಸ್ ನಾಯಕರು  ಹಾಗೂ ಕಾರ್ಯಕರ್ತರು ಎಲ್ಲಾ ಸೇರಿ ಒಗ್ಗಟ್ಟಿನ ಕೆಲಸ ಮಾಡಿದ್ದರಿಂದ ಸಾಧ್ಯವಾಯಿತು. ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಒಂದು ವರ್ಷದ ಮೊದಲೇ ಜಿಲ್ಲೆಯ ಎಲ್ಲ ನಾಯಕರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಯನ್ನು ಘೋಷಿಸಿದ್ದರಿಂದ ಅವರು ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸಿ ಮತದಾರರನ್ನು ಸಂಪರ್ಕಿಸಿದ ಪರಿಣಾಮ ಈ ಗೆಲುವು ಪ್ರಾಪ್ತಿಯಾಗಿದೆ ಇದಕ್ಕಾಗಿ ಪದವೀಧರ ಮತದಾರರು, ಸಂಘಟನೆಗಳ ಪದಾಧಿಕಾರಿಗಳು ಮುಖ್ಯವಾಗಿ ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ ಹಾಗೂ ಕೀಲಾರ ಜಯರಾಮ್ ಸಹಕಾರದಿಂದ ಮಧು ಮಾದೇಗೌಡ ಜಯಶಾಲಿಯಾಗಿದ್ದು, ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಜೆಡಿಎಸ್ ಜೊತೆ ಹೊಂದಾಣಿಕೆ ಇಲ್ಲ ಜೆಡಿಎಸ್ ಪಕ್ಷದ ಜೊತೆ ಇನ್ನು ಮುಂದೆ ಯಾವ ಸಂದರ್ಭದಲ್ಲಿ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಚಲುವರಾಯಸ್ವಾಮಿ ತಿಳಿಸಿದರು. ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗೂ ನಮ್ಮ ಅಭ್ಯರ್ಥಿ ಮಧು ಮಾದೇಗೌಡರಿಗೂ 26 ಸಾವಿರ ಮತಗಳ ಅಂತರವಿದ್ದು, ಮತದಾರಿಗೆ ಎಲ್ಲವೂ ಗೊತ್ತಾಗಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ನೂರಕ್ಕೆ ನೂರರಷ್ಟು ಮಂಡ್ಯ ಜಿಲ್ಲೆಯ ಏಳು ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿಯಿಂದ ದುರಾಡಳಿತ

ಬಿಜೆಪಿ ಪಕ್ಷ ರಾಜ್ಯದಲ್ಲಿ ದುರಾಡಳಿತ ನಡೆಸುತ್ತಿದ್ದು, 2023ಕ್ಕೆ ಈ ದುರಾಡಳಿತ ಅಂತ್ಯಗೊಳ್ಳಲಿದೆ.ರಾಜ್ಯದ ಜನರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಲಿದ್ದಾರೆ ಎಂದು ತಿಳಿಸಿದರು.

ಎಪಿಎಂಸಿ ಕಾಯ್ದೆ ಮಾಡುವ ಸಂದರ್ಭದಲ್ಲಿ,ಮಂಡ್ಯ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಜೊತೆ ಕೈಜೋಡಿಸಿದೆ. ಮನ್ಮುಲ್ ಹಗರಣ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದ ಅವರು 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭಾರಿ ಬಹುಮತದೊಂದಿಗೆ ಅಧಿಕಾರ ಹಿಡಿಯಲಿದೆ ಎಂದು ತಿಳಿಸಿದರು.

ವಿಧಾನ ಪರಿಷತ್ ನೂತನ ಸದಸ್ಯ ಮಧು ಜಿ ಮಾದೇಗೌಡ, ಮಾಜಿ ಸಚಿವ ಪಿ‌.ಎಂ. ನರೇಂದ್ರಸ್ವಾಮಿ, ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮಾಜಿ ಶಾಸಕರಾದ ಪ್ರಕಾಶ್,ರಮೇಶ್ ಬಾಬು ಬಂಡಿಸಿದ್ದೇಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ. ಗಂಗಾಧರ್, ಡಾ. ಕೃಷ್ಣ, ರುದ್ರಪ್ಪ ಮುಖಂಡರಾದ ಗಣಿಗ ರವಿ ಕುಮಾರ್ ಉಪಸ್ಥಿತರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!