Tuesday, November 24, 2026

ಪ್ರಾಯೋಗಿಕ ಆವೃತ್ತಿ

10 ಕೋಟಿ ರೂ‌. ವೆಚ್ಚದಲ್ಲಿ ಹೊಸಹೊಳಲು ಕೆರೆ ಅಭಿವೃದ್ಧಿ

ಕೆ.ಆರ್.ಪೇಟೆ ತಾಲ್ಲೂಕಿನ ಹೊಸಹೊಳಲು ಚಿಕ್ಕಕೆರೆಯನ್ನು 10 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಹೇಳಿದರು.

ಸೋಮವಾರ ಹೊಸಹೊಳಲು ಚಿಕ್ಕಕೆರೆ ಸಮಗ್ರ ಅಭಿವೃದ್ಧಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ವಾಕಿಂಗ್ ಪಾಥ್, ಪೌಂಟೇನ್ ಸೇರಿದಂತೆ ಸಮಗ್ರ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದರು.

ಇದರ ಜೊತೆಗೆ ಹೊಸಹೊಳಲುವಿನಲ್ಲಿ 1 ಕೋಟಿ ವೆಚ್ಚದಲ್ಲಿ ಅರಸು ಭವನ ನಿರ್ಮಾಣ ಶಂಕುಸ್ಥಾಪನೆ, 11 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಶಾಲಾ ಕಟ್ಟಡ ಹಾಗೂ ಶಾಸಕರ ಅನುದಾನದಲ್ಲಿ ನಿರ್ಮಿಸಿರುವ ಆಟೋ ನಿಲ್ದಾಣವನ್ನು ಸಚಿವರು ಉದ್ಘಾಟನೆಗೊಳಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ