Wednesday, November 18, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಶೇಖ್ ತನ್ವೀರ್ ಆಸಿಫ್ ಭೇಟಿ: ಪರಿಶೀಲನೆ

ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗ, ಪುರುಷ, ಮಹಿಳಾ ವಾರ್ಡ್ ಮತ್ತು ಡಯಾಲಿಸಿಸ್ ವಿಭಾಗ, ಶಸ್ತ್ರ ಚಿಕಿತ್ಸಾ ವಿಭಾಗ ಹಾಗೂ ಹೆರಿಗೆ ವಿಭಾಗ, ಐ.ಸಿ.ಯು ವಿಭಾಗಗಳಿಗೆ ಭೇಟಿ ನೀಡಿ ಅಲ್ಲಿನ ಅಧಿಕಾರಿ ವರ್ಗ ಮತ್ತು ಸಿಬ್ಬಂದಿಗಳಿಗೆ ಸಲಹೆ ಮತ್ತು ಸೂಚನೆಗಳು ನೀಡಿ ಹೊರ/ಒಳ ರೋಗಿಗಳ ಕುಂದುಕೊರತೆಗಳನ್ನು ವಿಚಾರಿಸಿದರು. ವೈದ್ಯರು ರೋಗಿಗಳಿಗೆ ಸಕಾಲದಲ್ಲಿ ಸ್ಪಂದಿಸಬೇಕು. ವೈದ್ಯರು ಹಾಗೂ ಸಿಬ್ಬಂದಿಗಳು ನಿಗದಿತ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗುವಂತೆ ತಿಳಿಸಿದರು.

ಆಸ್ಪತ್ರೆಯ ಆವರಣದಲ್ಲಿ ನಡೆಯುತ್ತಿರುವ ಸಿವಿಲ್ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಆಸ್ಪತ್ರೆಯನ್ನು ಐ.ಎಸ್.ಓ, ಎನ್.ಎ.ಬಿ.ಹೆಚ್ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳುವಂತೆ ವೈದ್ಯಾಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು.

ರಕ್ತ ಪರೀಕ್ಷಾಲಯದಲ್ಲಿರುವಂತಹ ಉಪಕರಣಗಳನ್ನು ಸಾರ್ವಜನಿಕರಿಗೆ ಅನುಕೂಲವಾಗುವಂತೆ ತ್ವರಿತಗತಿಯಲ್ಲಿ ಉಪಯೋಗಿಸುವಂತೆ ಸದಾ ಸಿದ್ಧವಿರಬೇಕು ಎಂದ ಅವರು ಹೆರಿಗೆ ವಿಭಾಗಕ್ಕೆ ಭೇಟಿ ನೀಡಿ ಉತ್ತಮ ವ್ಯವಸ್ಥೆಯನ್ನು ಕಂಡು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ಎ.ಬಿ.ಎ.ಆರ್.ಕೆ ಯೋಜನೆಯಡಿ ಆಗಸ್ಟ್ – 2023 ರ ಮಾಹೆಯಲ್ಲಿ 594 ಒಳರೋಗಿಗಳ ದಾಖಲಾತಿಯನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ತಾಲ್ಲೂಕು ಆಸ್ಪತ್ರೆ ಮಳವಳ್ಳಿಯನ್ನು ರಾಜ್ಯದಲ್ಲಿ ಒಂದು ಮಾದರಿ ಆಸ್ಪತ್ರೆಯನ್ನಾಗಿ ಮಾಡಲು ವೈದ್ಯರು ಹಾಗೂ ಸಿಬ್ಬಂದಿಗಳು ಸಹಕರಿಸಬೇಕೆಂದು ತಿಳಿಸಿದರು. ನಂತರ ಸಮುದಾಯ ಆರೋಗ್ಯ ಕೇಂದ್ರ ಕಿರುಗಾವಲುಗೆ ಭೇಟಿ ನೀಡಿ ನೀಡಿದರು.

ಪರಿಶೀಲನೆ ವೇಳೆ ಮಳವಳ್ಳಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೀರಭದ್ರಪ್ಪ. ಪಿ.ಆಡಳಿತ ವೈದ್ಯಾಧಿಕಾರಿ ಡಾ. ವಿನೀತ್, ಮಕ್ಕಳ ತಜ್ಞರಾದ ಡಾ. ದಿವ್ಯ, ದಂತ ತಜ್ಞರಾದ ಡಾ.ವಿಜಯ್, ಆಯುಷ್‌ ವೈದ್ಯಾಧಿಕಾರಿ ಡಾ. ಯೋಗೇಶ್ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ