ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ ಮಾಂಡೌಸ್ ಚಂಡಮಾರುತದ ಪರಿಣಾಮ ಸುರಿಯುತ್ತಿರುವ ನಿರಂತರ ಮಳೆಗೆ ಹಲವೆಡೆ ಮನೆಗಳು ಕುಸಿದಿವೆ.
ಕಳೆದ ಎರಡು-ಮೂರು ದಿನಗಳಿಂದ ಬಿಟ್ಟೂ ಬಿಡದೆ ಮಳೆ ಸುರಿದ ಪರಿಣಾಮ ತಾಲೂಕಿನ ತಗ್ಗಹಳ್ಳಿ ಪುರ ಗ್ರಾಮದಲ್ಲಿ ನಿನ್ನೆ ರಾತ್ರಿ ಬಿದ್ದ ಮಳೆಗೆ ರಾಜಮ್ಮ ಎಂಬುವರ ಮನೆ ಕುಸಿದು,ಅವರ ಕುಟುಂಬ ಸೂರು ಕಳೆದುಕೊಂಡಿದೆ.
ಇಂದು ಮಳೆ ಹಾನಿ ಸ್ಥಳಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಇಂಡುವಾಳು ಎಸ್.ಸಚ್ಚಿದಾನಂದ ಮನೆ ಕಳೆದುಕೊಂಡ ರಾಜಮ್ಮ ಅವರಿಗೆ ವೈಯಕ್ತಿಕವಾಗಿ ಧನ ಸಹಾಯ ಮಾಡಿ ಸಾಂತ್ವನ ಹೇಳಿದರು.
ಸ್ಥಳದಲ್ಲೇ ತಹಶೀಲ್ದಾರ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಫೋನ್ ಮಾಡಿ ತಕ್ಷಣವೇ ಸರ್ಕಾರದ ವತಿಯಿಂದ ಪರಿಹಾರ ಕೊಡಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ತಗ್ಗಹಳ್ಳಿ ಪುರ ಗ್ರಾಮದ ಯಜಮಾನರು, ಮುಖಂಡರು ಹಾಗೂ ಯುವಕ ಮಿತ್ರರು ಉಪಸ್ಥಿತರಿದ್ದರು.




