Saturday, November 21, 2026

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಪೇಟೆ| ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಗೃಹೋಪಯೋಗಿ ವಸ್ತುಗಳು ಭಸ್ಮ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಯಲ್ಲಿನ ಫ್ರಿಡ್ಜ್, ಸಾಮಗ್ರಿಗಳು, ಬಟ್ಟೆ-ಬರೆ ಸೇರಿದಂತೆ ಹಲವು ಗೃಹೋಪಯೋಗಿ ವಸ್ತುಗಳು ಬೆಂಕಿಯಿಂದ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.

ಕೆ.ಆರ್.ಪೇಟೆ ಪಟ್ಟಣದ ಜಯನಗರ ಬಡಾವಣೆಯಲ್ಲಿ ವಾಸವಿರುವ ಶಿಕ್ಷಕಿ ಅನಿತಾ ಅವರಿಗೆ ಸೇರಿದ ಮನೆಯಲ್ಲಿ ಶುಕ್ರವಾರ ತಡರಾತ್ರಿ ಸುರಿದ ಮಳೆಯ ವೇಳೆ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಘಟನೆ ಸಂಭವಿಸಿದೆ.

ಇದರಿಂದಾಗಿ ಮನೆಯಲ್ಲಿದ್ದ ಪ್ರಿಡ್ಜ್ ಗೆ ಬೆಂಕಿಯಿಂದ ಹೊತ್ತಿಕೊಂಡಿದ್ದು. ಬೆಂಕಿಯ ಕೆನ್ನಾಲಿಗೆಗೆ ಗಡಿಯಾರ ಬಟ್ಟೆ-ಬರೆಗಳು ಸೇರಿದಂತೆ ಮನೆಯ ಹಲವು ಸಾಮಗ್ರಿಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾಗಿವೆ.

ಶನಿವಾರ ಬೆಳಿಗ್ಗೆ ಸ್ಥಳೀಯರು ಮನೆಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿದ ಠಾಣಾಧಿಕಾರಿ ಶಿವಣ್ಣ ನೇತೃತ್ವದ ತಂಡ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡು ಬೆಂಕಿ ನಂದಿಸಿದ್ದಾರೆ.

ಘಟನೆಯ ವೇಳೆ ಮನೆಯಲ್ಲಿ ಯಾರೂ ಇರದ ಕಾರಣ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಚೆಸ್ಕಾಂ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ