Friday, September 20, 2024

ಪ್ರಾಯೋಗಿಕ ಆವೃತ್ತಿ

ಪ್ರತಿ ಮನೆಗಳಿಗೂ ಶುದ್ಧ ಕುಡಿಯುವ ನೀರು: ಹೆಚ್.ಟಿ.ಮಂಜು

ಜಲ ಜೀವನ್ ಮಿಷನ್ ಯೋಜನೆ ಮೂಲಕ ಗ್ರಾಮೀಣ ಪ್ರದೇಶದ ಪ್ರತಿ ಮನೆಗಳಿಗೂ ನಲ್ಲಿ ಮೂಲಕ ಶುದ್ಧ ಕುಡಿಯುವ ನೀರು ಒದಗಿಸಲಾಗುವುದು ಎಂದು ಶಾಸಕ ಹೆಚ್.ಟಿ ಮಂಜು ಹೇಳಿದರು.

ಕೆ.ಆರ್.ಪೇಟೆ ತಾಲೂಕಿನ ಅಗ್ರಹಾರಬಾಚಹಳ್ಳಿ ಗ್ರಾಮದಲ್ಲಿ ಒಂದು ಕೋಟಿಗೂ ಹೆಚ್ಚು ರೂ ವೆಚ್ಚದಲ್ಲಿ ಜಲ ಜೀವನ್ ಮಿಷನ್ ಯೋಜನೆಯ ನಿರ್ಮಾಣ ಮತ್ತು ಪ್ರತಿ ಮನೆಗೆ ನಲ್ಲಿ ಮೂಲಕ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸ ಮಾತನಾಡಿದರು.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಜಲಜೀವನ್ ಮಿಷನ್ ಸಹ ಒಂದಾಗಿದೆ, ಗ್ರಾಮೀಣ ಭಾಗದಲ್ಲಿ ಶುದ್ದ ಕುಡಿಯುವ ನೀರಿನ ಸಮಸ್ಯೆಯಿಂದ ವಿವಿಧ ಕಾಯಿಲೆಗಳಿಗೆ ತುತ್ತಾಗುತ್ತಿದ್ದು, ಗ್ರಾಮೀಣ ಪ್ರದೇಶ ಜನರು ಇತ್ತೀಚಿನ ದಿನಗಳಲ್ಲಿ ಅನಾರೋಗ್ಯಕ್ಕೆ ತುತ್ತಾಗುತ್ತಿರುವುದು ಕಂಡುಬರುತ್ತಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ಪ್ರತಿ ಮನೆಗೆ ನಲ್ಲಿ ಮೂಲಕ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಜಲ ಜೀವನ್ ಮಿಷನ್ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ರಶ್ಮಿ, ಬಿಂದು, ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ಅಗ್ರಹಾರಬಾಚಹಳ್ಳಿ ನಾಗೇಶ್, ಗ್ರಾ.ಪಂ ಅಧ್ಯಕ್ಷ ದಿವಿ ಕುಮಾರ್, ಉಪಾಧ್ಯಕ್ಷ ಸುನೀತಾ ದ್ಯಾವಯ್ಯ, ಗ್ರಾ.ಪಂ ಸದಸ್ಯರಾದ ಅಗ್ರಹಾರಬಾಚಹಳ್ಳಿ ಶ್ರೀನಿವಾಸ್, ರಮೇಶ್,ನಂಜೇಗೌಡ, ರೇವತಿ ಹರೀಶ್,ಚನ್ನೇಗೌಡ, ಸಾವಿತ್ರಮ್ಮ, ರೇಣುಕಾ, ನೇತ್ರಾವತಿ, ಶೀಳನೆರೆ ಗ್ರಾ.ಪಂ ಸದಸ್ಯ ಸಿದ್ದೇಶ್, ಅಗ್ರಹಾರಬಾಚಹಳ್ಳಿ ಲೋಕೇಶ್, ಪಿಡಿಓ ವಿನೋದ್ ಕುಮಾರ್, ಶಾಸಕರ ಆಪ್ತ ಸಹಾಯಕ ಪ್ರದೀಪ್ ಸೇರಿದಂತೆ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!