Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ ಲೋಕಸಭೆ| 8 ವಿಧಾನಸಭಾ ಕ್ಷೇತ್ರಗಳಲ್ಲೂ ಕುಮಾರಸ್ವಾಮಿಗೆ ಭರ್ಜರಿ ಲೀಡ್

ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲೂ ಹೆಚ್.ಡಿ. ಕುಮಾರಸ್ವಾಮಿ ಭರ್ಜರಿ ಲೀಡ್ ಪಡೆಯುವ ಮೂಲಕ ಆಡಳಿತರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಸೋಲಿಗೆ ಕಾರಣರಾಗಿದ್ದಾರೆ.

ಎಚ್ ಡಿ ಕುಮಾರಸ್ವಾಮಿ ಅವರು 8,51,881 ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಸ್ಟಾರ್ ಚಂದ್ರು (ವೆಂಕಟರಮಣೇ ಗೌಡ) 5,67,261 ಮತಗಳನ್ನು ಪಡೆದಿದ್ದಾರೆ.

ಕುಮಾರಸ್ವಾಮಿಯವರು 2,84,620 ಮತಗಳ ಭಾರಿ ಅಂತರದಿಂದ ಗೆಲುವು ಸಾಧಿಸುವ ಮೂಲಕ ಕಳೆದ ಲೋಕಸಭೆಯಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅನುಭವಿಸಿದ ಸೋಲಿಗೆ ತಿರುಗೇಟು ನೀಡಿದ್ದಾರೆ.

ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಭರ್ಜರಿ ಲೀಡ್ ಪಡೆದಿದ್ದಾರೆ. ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ 56,778 ಮತಗಳ ಭಾರೀ ಲೀಡ್ ಪಡೆದಿದ್ದರೆ, ಶ್ರೀರಂಗಪಟ್ಟಣದಲ್ಲಿ 48,589, ನಾಗಮಂಗಲದಲ್ಲಿ 46,511, ಮೇಲುಕೋಟೆ ಕ್ಷೇತ್ರದಲ್ಲಿ 49,882, ಮಂಡ್ಯದಲ್ಲಿ 38,220, ಕೆ.ಆರ್. ಪೇಟೆಯಲ್ಲಿ ,26, 522, ಮಳವಳ್ಳಿಯಲ್ಲಿ 9,355 ಹಾಗೂ ಕೆ.ಆರ್. ನಗರದಲ್ಲಿ 6,847 ಮತಗಳ ಭರ್ಜರಿ ಲೀಡ್ ಪಡೆದಿದ್ದಾರೆ. ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ಅವರ ಕ್ಷೇತ್ರ ನಾಗಮಂಗಲದಲ್ಲಿ 46,511 ಮತಗಳ ಭಾರೀ ಲೀಡ್ ಪಡೆಯುವ ಮೂಲಕ ಅವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕಾದ ಸೋಲಿಗೆ ತಿರುಗೇಟು ನೀಡಿದ್ದಾರೆ.

ಮಳವಳ್ಳಿ ಹಾಗೂ ಕೆ. ಆರ್. ನಗರದಲ್ಲಿ ಹತ್ತು ಸಾವಿರದ ಒಳಗೆ ಲೀಡ್ ಪಡೆದಿರುವ ಕುಮಾರಸ್ವಾಮಿ ಉಳಿದ ಎಲ್ಲಾ ಕ್ಷೇತ್ರಗಳಲ್ಲಿಯೂ ಭರ್ಜರಿ ಪಡೆದಿದ್ದಾರೆ.ಆ ಮೂಲಕ ಕಳೆದ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪುತ್ರ ನಿಖಿಲ್ ಸೋಲಿಗೆ ಕಾರಣರಾಗಿದ್ದ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ