Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಾನವ ಹಕ್ಕುಗಳ ಅರಿವು ಅಗತ್ಯ : ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಮಮತಾ ಶಿವಪೂಜಿ

ಸಂವಿಧಾನದಲ್ಲಿ ಇರುವ ಮಾನವ ಹಕ್ಕುಗಳ ಮಹತ್ವವನ್ನು ಪ್ರತಿಯೊಬ್ಬರು ತಿಳಿದುಕೊಳ್ಳಬೇಕು. ಆ ಮೂಲಕ ಮತ್ತೊಬ್ಬರ ಸ್ವಾತಂತ್ರ‍್ಯವನ್ನು ಗೌರವಿಸಿ ಬದುಕುವುದನ್ನು ಕಲಿತರೆ ಮಾನವ ಹಕ್ಕುಗಳನ್ನು ಪಾಲನೆ ಮಾಡಿದಂತಾಗುತ್ತದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಮಮತಾ ಶಿವಪೂಜಿ ತಿಳಿಸಿದರು.

ತಾಲ್ಲೂಕಿನ ಕೊರೇಗಾಲ ಗ್ರಾಮದ ಹೊರವಲಯದ ಸರ್ಕಾರಿ ಪಾಲಿಟಿಕ್ನಿಕ್ ಕಾಲೇಜು ಆವರಣಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಪೊಲೀಸ್ ಇಲಾಖೆ ಹಾಗೂ ಮಾಮರ ಚಾರಿಟಬಲ್ ಟ್ರಸ್ಟ್ ಸಹಯೋಗದೊಂದಿಗೆ ನಡೆದ ವಿಶ್ವಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ನಡೆಯಿತು.

ವಿಶ್ವಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಾನವ ಹಕ್ಕುಗಳ ಕಾಯ್ದೆ ಅಡಿಯಲ್ಲಿ ಎಲ್ಲರೂ ಸಮಾಜದಲ್ಲಿ ಸಮಾನತೆ, ಸ್ವತಂತ್ರ‍್ಯ ಹಾಗೂ ಸಂರಕ್ಷಣೆಯಿಂದ ಬದುಕುವ ಹಕ್ಕು ಹೊಂದಿದ್ದಾರೆ ಎಂದು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿ.ಮಾದೇಶ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಾನವ ಹಕ್ಕು ಕಾಯ್ದೆಯಡಿ ದೇಶದ ಉನ್ನತ ಪ್ರಜೆಯಿಂದ ಒಬ್ಬ ಸಾಮಾನ್ಯ ವ್ಯಕ್ತಿಗೂ ಅವರದೇ ಆದ ಸ್ವಾತಂತ್ರ‍್ಯವಾಗಿ ಬದುಕವ ಹಕ್ಕಿದೆ.

ವಿಶ್ವದಲ್ಲಿನ ಅಸಮಾನತೆಯನ್ನು ಹೋಗಲಾಡಿಸಿ, ಎಲ್ಲರಿಗೂ ಸಮಾನವಾದ ಹಕ್ಕುಗಳಿವೆ ಎನ್ನುವ ಭಾವನೆ ಮೂಡಿಸುವ ಉದ್ದೇಶದಿಂದ 1948ರಲ್ಲಿ ಈ ಕಾಯ್ದೆಯನ್ನು ವಿಶ್ವಸಂಸ್ಥೆ ರೂಪಿಸಿತು. ಮಾನವ ಹಕ್ಕುಗಳನ್ನು ಉಲ್ಲಂಘನೆ ಮಾಡುವವರಿಗೆ ಕಾನೂನಿನ ಅಡಿಯಲ್ಲಿ ಕಠಿಣ ಶಿಕ್ಷೆಯನ್ನೂ ವಿಧಿಸಲಾಗುವುದು ಎಂದು ಹೇಳಿದರು.

ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ಡಿ.ಎಂ.ಸುAದರ್, ಎಂ.ಶಿವಕುಮಾರ್, ವಕೀಲರಾದ ಶ್ರೀಕಂಠಸ್ವಾಮಿ, ಮುತ್ತುರಾಜು, ಪ್ರಾಂಶುಪಾಲ ಕೆ.ಮಹದೇವಸ್ವಾಮಿ ಸೇರಿದಂತೆ ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!