Saturday, May 18, 2024

ಪ್ರಾಯೋಗಿಕ ಆವೃತ್ತಿ

ಮಾನವೀಯ ಮೌಲ್ಯ ಅಳವಡಿಸಿಕೊಂಡು ಸತ್ಪ್ರಜೆಗಳಾಗಿ-ನ್ಯಾ.ಓಂಕಾರಮೂರ್ತಿ

ಯುವಜನರು ಮಾದಕ ಚಟದಿಂದ ದೂರವಿದ್ದು ಶಿಸ್ತು, ಸಂಯಮ ಸೇರಿದಂತೆ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸತ್ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ಜೆ.ಎಂ.ಎಫ್.ಸಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಹೆಚ್.ಓಂಕಾರಮೂರ್ತಿ ತಿಳಿಸಿದರು.

ಕೆ.ಆರ್.ಪೇಟೆ ಪಟ್ಟಣದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಆರೋಗ್ಯ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಡೆದ  ಮಾದಕ ವ್ಯಸನಗಳ ತಡೆ ಹಾಗೂ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ದಿನಗಳಲ್ಲಿ ಯುವಜನರು ಮಾದಕ ವಸ್ತುಗಳ ಸೇವನೆ ಸೇರಿದಂತೆ ದುಷ್ಚಟಗಳಿಗೆ ದಾಸರಾಗಿ ತಮ್ಮ ಅಮೂಲ್ಯವಾದ ಜೀವನವನ್ನೇ ಹಾಳು ಮಾಡಿಕೊಳ್ಳುವ ಜೊತೆಗೆ ಸಮಾಜ ಕಂಟಕರಾಗಿ ಬದಲಾಗುತ್ತಿದ್ದಾರೆ. ತಂದೆತಾಯಿಗಳಿಗೆ ಹಾಗೂ ಸಮಾಜಕ್ಕೆ ಕೊಡುಗೆಯನ್ನು ನೀಡಬೇಕಾದ ಯುವಜನರು ದುಶ್ಚಟಗಳಿಗೆ ಒಳಗಾಗಿ ಸಮಾಜಕ್ಕೆ ಹೊರೆಯಾಗಿ ಶಾಪವಾಗಿದ್ದಾರೆಂದು ಬೇಸರ ವ್ಯಕ್ತಪಡಿಸಿದರು.

ತಹಶೀಲ್ದಾರ್ ಎಂ.ವಿ.ರೂಪ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿ ಜೀವನದಲ್ಲಿ ಸಾಧನೆ ಮಾಡುವ ಸಮಯದಲ್ಲಿ ಕ್ಷಣಿಕ ಸುಖದ ಆಸೆಗೆ ಒಳಗಾಗಿ ಮಾದಕ ವಸ್ತುಗಳು ಸೇರಿದಂತೆ ದುಶ್ಚಟಗಳಿಗೆ ಒಳಗಾದರೆ, ನಮ್ಮ ಜೀವನ ಹಾಗೂ ಬದುಕೇ ಸಂಪೂರ್ಣವಾಗಿ ನಾಶವಾಗುತ್ತದೆ ಎಂದರು.

ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಡಾ.ಕೆ.ಆರ್.ದಿನೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವಕೀಲರ ಸಂಘದ ಅಧ್ಯಕ್ಷ ಎನ್.ಆರ್.ರವಿಶಂಕರ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಕೆ.ಎಸ್.ಶಿವಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಧುಸೂದನ್, ಅಪರ ನ್ಯಾಯಾಲಯದ ನ್ಯಾಯಾಧೀಶರಾದ ಶಕುಂತಲಾ, ಸರ್ಕಾರಿ ಅಭಿಯೋಜಕ ಬಿ.ಸಿ.ರಾಜೇಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತಿಮ್ಮರಾಜು, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಕೆ.ರಾಜೇಗೌಡ, ಉಪಾಧ್ಯಕ್ಷ ಬಿ.ಸಿ.ದಿನೇಶ್, ಜಂಟಿ ಕಾರ್ಯದರ್ಶಿ ಸಿ.ನಿರಂಜನ ಭಾಗವಹಿಸಿದ್ದರು. ಪ್ಲೇಸ್ಮೆಂಟ್ ಅಧಿಕಾರಿ ರುದ್ರಪ್ಪ ಕಾರ್ಯಕ್ರಮ ನಿರೂಪಿಸಿದರು..

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!