ಜೀವಸಂಕುಲದ ಉಳಿವಿಗಾಗಿ ಕೆರೆಕಟ್ಟೆಗಳಿಗೆ ನೀರು ಹರಿಸಲು ಆಗ್ರಹಿಸಿ , ಬಿಜೆಪಿ ಮುಖಂಡ ಚಂದಗಾಲು ಶಿವಣ್ಣ ನೇತೃತ್ವದಲ್ಲಿ ಮಂಡ್ಯದಲ್ಲಿ ಮಂಗಳವಾರ ಉಪವಾಸ ಸತ್ಯಾಗ್ರಹ ನಡೆಸಲಾಯಿತು.
ಮಂಡ್ಯ ನಗರದ ಸರ್ ಎಂ ವಿ ಪ್ರತಿಮೆ ಎದುರು ಉಪವಾಸ ನಡೆಸಿ ಕೃಷ್ಣರಾಜಸಾಗರ ಜಲಾಶಯದಿಂದ ಕೆರೆಕಟ್ಟೆಗಳಿಗೆ ನೀರು ಹರಿಸಿ ಜೀವಸಂಕುಲ ಕಾಪಾಡಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯಲ್ಲಿ ಮಳೆ ಅಭಾವ ಮತ್ತು ಭೀಕರ ಬರಗಾಲದಿಂದ ನೀರಿನ ಕೊರತೆ ಎದುರಾಗಿದ್ದು,ಕೆರೆಕಟ್ಟೆಗಳೆಲ್ಲ ನೀರಿಲ್ಲದೆ ಒಣಗಿವೆ, ಜನ-ಜಾನುವಾರುಗಳಿಗೆ ಕುಡಿಯಲು ನೀರಿಲ್ಲದಂತಹ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ, ನೀರಿನ ಹಾಹಾಕಾರ ಹೆಚ್ಚಾಗಿದ್ದು, ಇಂತಹ ಪರಿಸ್ಥಿತಿಯಿಂದ ಜಾನುವಾರು ಮತ್ತು ಪಕ್ಷಿ ಸಂಕುಲ ಕುಡಿಯಲು ನೀರಿಲ್ಲದೆ ಸಾವನ್ನಪ್ಪುವ ಪರಿಸ್ಥಿತಿ ಎದುರಾಗಿದೆ ದಿನೇ ದಿನೇ ಪರಿಸ್ಥಿತಿ ಕೈ ಮೀರುತಿದೆ, ಆದ್ದರಿಂದ ಕೂಡಲೇ ನೀರು ಬಿಡುಗಡೆ ಮಾಡಬೇಕೆಂದು ಶಿವಣ್ಣ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಂಜುನಾಥ್, ಕೇಶವ್, ಶಾಮಸುಂದರ್ ಮತ್ತಿತರರಿದ್ದರು.




