Tuesday, October 22, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಜು.2ರಂದು ಐಎಎಸ್- ಐಪಿಎಸ್ ಪರೀಕ್ಷೆ ಕುರಿತು ವಿಚಾರ ಸಂಕಿರಣ

ಮಂಡ್ಯದ ಗಾಂಧಿ ಭವನದಲ್ಲಿ ಜುಲೈ 2 ರಂದು ಐಎಎಸ್‌ ಮತ್ತು ಐಪಿಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ವಿಚಾರ ಸಂಕಿರಣ ನಡೆಯಲಿದೆ ಎಂದು ಕನ್ನಡಸೇನೆ ಜಿಲ್ಲಾಧ್ಯಕ್ಷ ಎಚ್‌‌.ಸಿ.ಮಂಜುನಾಥ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ವಿಚಾರ ಸಂಕಿರಣವನ್ನು ಜಿಲ್ಲಾಧಿಕಾರಿ ಡಾ.ಕುಮಾರ ಉದ್ಘಾಟಿಸಲಿದ್ದು, ಮೈಸೂರು ಮಹಾರಾಣಿ ಕಾಲೇಜಿನ ಪ್ರಾಧ್ಯಾಪಕ ಡಾ‌.ಹೇಮಚಂದ್ರ ವಿಚಾರ ಮಂಡಿಸಲಿದ್ದಾರೆ.ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್ ಅಧ್ಯಕ್ಷ ತೆ ವಹಿಸಲಿದ್ದು,ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎನ್‌.ಯತೀಶ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಪಿಇಟಿ ಅಧ್ಯಕ್ಷ ಕೆ.ಎಸ್. ವಿಜಯಾನಂದ್,ಎಸ್.ಬಿ.ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಮೀರಾ ಶಿವಲಿಂಗಯ್ಯ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.

ಶೈಕ್ಷಣಿಕ ಸೇವೆ

ಜಿಲ್ಲೆಯ ವಿದ್ಯಾರ್ಥಿಗಳು ಹಾಗೂ ಯುವಜನರ ಶೈಕ್ಷಣಿಕ ಅಭಿವೃದ್ಧಿಗೆ ಕನ್ನಡ ಸೇನೆ ಕೆಲಸ ಮಾಡುತ್ತಿದ್ದು,ಈ ವಿಚಾರ ಸಂಕಿರಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಕೆಂದು ಮನವಿ ಮಾಡಿದರು.

ರೈತರ ಮಕ್ಕಳು ಶೈಕ್ಷಣಿಕವಾಗಿ ಮುನ್ನಡೆಯಬೇಕು.ರಾಜಕಾರಣಿಗಳು, ಶೈಕ್ಷಣಿಕ ಕಾರ್ಯಕ್ರಮ ಮಾಡದೆ ಇನ್ನಿತರ ಅದ್ದೂರಿ ಕಾರ್ಯಕ್ರಮಗಳನ್ನು ಅಯೋಜಿಸುತ್ತಾರೆ. ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಈ ವಿಚಾರ ಸಂಕಿರಣ ಆಯೋಜನೆ ಮಾಡಲಾಗಿದ್ದು, ವಿದ್ಯಾರ್ಥಿಗಳು ಐಎಎಸ್, ಐಇಎಸ್ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಡೆದು ಸಾಧನೆ ಮಾಡಬೇಕು. ಇತ್ತೀಚಿನ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕೋಚಿಂಗ್ ಸೆಂಟರ್ ಗಳು ಹೆಚ್ಚಾಗಿವೆ. ಸರ್ಕಾರ ಬಡ ಮಕ್ಕಳಿಗಾಗಿ ಶೈಕ್ಷಣಿಕ ಕ್ಷೇತ್ರದತ್ತ ಹೆಜ್ಜೆ ಹಾಕಬೇಕು. ಬಡ ರೈತರ ಮಕ್ಕಳಿಗೆ ಅನುಕೂಲವಾಗುವ ವ್ಯವಸ್ಥೆ ಮಾಡಿಕೊಡಬೇಕು. ಮಂಡ್ಯ ಜಿಲ್ಲೆಯ ಸ್ಪರ್ಧಾತ್ಮಕ ವಿದ್ಯಾರ್ಥಿಗಳು ಈ ವಿಚಾರ ಸಂಕಿರಣದ ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ‌ ಮಾಡಿದರು.

ಗೋಷ್ಟಿಯಲ್ಲಿ ರಾಜ್ಯ ಸಂಚಾಲಕಿ ದೇವಮ್ಮ, ಮಂಡ್ಯ ಜಿಲ್ಲಾ ಮಹಿಳಾ ಅಧ್ಯಕ್ಷೆ ಸೌಭಾಗ್ಯ ಶಿವಲಿಂಗು. ಜಿಲ್ಲಾ ಕಾರ್ಯ ಅಧ್ಯಕ್ಷರಾದ ಮಂಡಿ ಬೆಟ್ಟಳ್ಳಿ ಮಂಜುನಾಥ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೇಬಲ್ ಮಂಜು, ಜಿಲ್ಲಾ ಸಂಘಟನೆ ಕಾರ್ಯದರ್ಶಿಗಳಾದ ಪವಿತ್ರ ನಾಗರಾಜ್,ಜಿಲ್ಲಾ ಉಪಾಧ್ಯಕ್ಷರಾದ ಮಧು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!