Thursday, November 19, 2026

ಪ್ರಾಯೋಗಿಕ ಆವೃತ್ತಿ

ಐಬಿಪಿಎಸ್ ಬೃಹತ್ ನೇಮಕಾತಿ| 4045 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಅಹ್ವಾನ

ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್ (IBPS)ನಲ್ಲಿ ಖಾಲಿ ಇರುವ 4045 ಕ್ಲರ್ಕ್ XIII ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಇಲಾಖೆ ಹೆಸರು : ಇನ್ ಸ್ಟಿಟ್ಯೂಟ್ ಆಫ್ ಬ್ಯಾಕಿಂಗ್ ಪರ್ಸೋನಲ್ ಸೆಲೆಕ್ಷನ್ – IBPS

ಹುದ್ದೆಗಳ ಹೆಸರು: ಕ್ಲರ್ಕ್

ಒಟ್ಟು ಹುದ್ದೆಗಳು: 4045

ಅರ್ಜಿ ಸಲ್ಲಿಸುವ ಬಗೆ: ಅನ್ಲೈನ್

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 20 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಮೀರಿರಬಾರದು – ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 3 ವರ್ಷಗಳು ಹಾಗೂ – ಎಸ್ಸಿ, ಎಸ್ಟಿ ಪ್ರವರ್ಗ-1 ರ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಗರಿಷ್ಠ 5 ವರ್ಷಗಳು ಹಾಗೂ – ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳು ವಯೋಮಿತಿಯ ಸಡಿಲಿಕೆ ನಿಗದಿಪಡಿಸಲಾಗಿದೆ.

ವೇತನಶ್ರೇಣಿ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ರೂ 19,900/- ಗಳಿಂದ 47,920/-ರೂ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ, ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ರೂ.850, ಹಾಗೂ ಎಸ್ಸಿ, ಎಸ್ಸಿ ಅಂಗವಿಕಲ ಅಭ್ಯರ್ಥಿಗಳಿಗೆ ರೂ.175.ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ: ಅಭ್ಯರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಸಂದರ್ಶನ ನಡೆಸಿ, ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಜಾಹೀರಾತು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಜುಲೈ‌ 1, 2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 28, 2023

ನೋಟಿಫೀಕೇಷನ್ : ಇಲ್ಲಿ ಕ್ಲಿಕ್ ಮಾಡಿ 

ಆನ್ ಲೈನ್ ಅರ್ಜಿ : ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ