Thursday, September 19, 2024

ಪ್ರಾಯೋಗಿಕ ಆವೃತ್ತಿ

ಮನಸ್ಸು ನಿರ್ಮಲವಾಗಿದ್ದರೆ ಮಾತ್ರ ಆನಂದ

ಮನುಷ್ಯ ಆನಂದವಾಗಿ ಇರಬೇಕಾದರೆ ಮನಸ್ಸು ನಿರ್ಮಲವಾಗಿರಬೇಕು. ಮನಸ್ಸು ನಿರ್ಮಲವಾಗಿದ್ದರೆ ಮಾತ್ರ ಆನಂದವಾಗಿರಲು ಸಾಧ್ಯ. ನದಿಗಳ ಬಗ್ಗೆ ಶ್ರದ್ಧೆ ಇರಬೇಕು. ನದಿಗಳನ್ನು ನಾವು ರಕ್ಷಣೆ ಮಾಡಿದರೆ ನದಿಗಳು ನಮ್ಮನ್ನು ಉಳಿಸುತ್ತದೆ ಎಂದು ಹುಕ್ಕೇರಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಕೆ.ಆರ್.ಪೇಟೆ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ ಮಹಾ ಕುಂಭಮೇಳ ಅಂಗವಾಗಿ ನಡೆದ ಧಾರ್ಮಿಕ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತಾಡಿದರು.
ಮಹಾ ಕುಂಭಮೇಳವನ್ನು ವೀಕ್ಷಿಸಲು ಬೇರೆ ಬೇರೆ ರಾಜ್ಯಗಳಿಗೆ ಹೋಗುವಂತಹ ಪರಿಸ್ಥಿತಿ ಎದುರಾಗಿತ್ತು, ಆದರೆ ಇಂದು ದಕ್ಷಿಣ ಭಾರತದ ಅಂಬಿಗರ ಹಳ್ಳಿಯ ಪುಣ್ಯ ಸ್ಥಳವಾದ ಕಾವೇರಿ ಲಕ್ಷ್ಮಣ ತೀರ್ಥ, ಹೇಮಾವತಿ ಮೂರು ನದಿಗಳು ಸೇರುವ ತ್ರಿವೇಣಿ ಸಂಗಮದಲ್ಲಿ ಮಹಾ ಕುಂಭಮೇಳವನ್ನು ಆಚರಣೆ ಮಾಡುತ್ತಿದ್ದೇವೆ ಎಂದರು.

ಜಗದ್ಗುರು ಡಾ.ನಿರ್ಮಲಾನಂದನಾಥ ಮಹಾಸ್ವಾಮಿ ಹಾಗೂ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ ಅವರು ಮುಖ್ಯಮಂತ್ರಿಯವರ ಜೊತೆ ಮಾತನಾಡಿ ಮೈಸೂರಿಗೆ ಬರುವಂತಹ ಪ್ರವಾಸಿಗರು ಮೂರು ನದಿಗಳ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಪುಣ್ಯಸ್ನಾನವನ್ನು ಮಾಡುವ ರೀತಿ ಅಭಿವುದ್ದಿ ಪಡಿಸಿದರೆ ಈ ಕ್ಷೇತ್ರ ಅಭಿವೃದ್ದಿ ಯಾಗುತ್ತದೆ ಎಂಬುದಕ್ಕೆ ಎರಡು ಮಾತಿಲ್ಲ ಎಂದು ಹೇಳಿದರು.

ಎಡತೊರೆ ಯೋಗಾನಂದೇಶ್ವರ ಮಠದ ಶಂಕರಭಾರತಿ ಸ್ವಾಮೀಜಿ ಮಾತನಾಡಿ,

ತ್ರಿವೇಣಿ ಸಂಗಮ ಕಾವೇರಿ, ಹೇಮಾವತಿ ಹಾಗೂ ಲಕ್ಷ್ಮಣ ತೀರ್ಥ ದ ಪುಣ್ಯ ಸಂಗಮ ಕ್ಷೇತ್ರವಾಗಿದೆ. ಜಗದ್ಗುರು ಮಹದೇಶ್ವರರು ಪಾದಾರ್ಪಣೆ ಮಾಡಿ ಪವಿತ್ರವಾಗಿರುವ ಪುಣ್ಯ ಭೂಮಿಯಲ್ಲಿ ಮಹಾ ಕುಂಭಮೇಳ ನಡೆಯುತ್ತಿದೆ ಎಂದರು.

ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಶ್ರೀನಿರ್ಮಲಾನಂದನಾಥ ಮಹಾ ಸ್ವಾಮೀಜಿ, ಸುತ್ತೂರು ಮಠದ ಶ್ರೀಶಿವರಾತ್ರಿ ದೇಶೀಕೇಂದ್ರ ಮಹಾ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ನಾಡಿನ ವಿವಿಧ ಮಠಗಳ ಮಠಾಧೀಶರುಗಳು ಭಾಗವಹಿಸಿದರು.

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿ, ಕಾಗಿನೆಲೆ ಕನಕಗುರು ಪೀಠ ಶ್ರೀ ಶಿವಾನಂದಪುರಿ ಸ್ವಾಮೀಜಿ, ಬೇಬಿ ಮಠ ಮತ್ತು ಚಂದ್ರವನ ಆಶ್ರಮ ಶ್ರೀ ಡಾ.ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ, ರೇಷ್ಮೆ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರಾದ ಡಾ. ಕೆ.ಸಿ ನಾರಾಯಣ ಗೌಡ,  ಜಿಲ್ಲಾಧಿಕಾರಿ ಎಸ್.ಅಶ್ವತಿ, ಪಾಂಡವಪುರ ಉಪ ವಿಭಾಗಾಧಿಕಾರಿ ಬಿ.ಸಿ ಶಿವಾನಂದ ಮೂರ್ತಿ, ತಹಶೀದ್ದಾರ್ ರೂಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!