Friday, September 20, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಅಕ್ರಮ ಭೂ ಕಬಳಿಕೆ; ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಬೈಕ್ ರ್‍ಯಾಲಿ

ಮಳವಳ್ಳಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಭೂ ಕಬಳಿಕೆ ಬಗ್ಗೆ ಸಮಗ್ರ ನ್ಯಾಯಾಂಗ ತನಿಖೆ ನಡೆಸಿ ಅಕ್ರಮ ಭೂಮಿಯನ್ನು ವಶಪಡಿಸಿಕೊಂಡು ಬಡ ರೈತರಿಗೆ ಹಂಚಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜ.20ರಂದು ಮಳವಳ್ಳಿ ತಾಲೂಕು ತಹಸೀಲ್ದಾರ್ ಕಚೇರಿಯಿಂದ ಮಂಡ್ಯ ಜಿಲ್ಲಾಧಿಕಾರಿ ಕಚೇರಿವರೆಗೆ ಬೈಕ್ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಅಧ್ಯಕ್ಷ ಎನ್ ಎಲ್ ಭರತ್ ರಾಜ್ ತಿಳಿಸಿದರು.

ಮಳವಳ್ಳಿ ಪಟ್ಟಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮಳವಳ್ಳಿ ತಾಲೂಕಿನ ಕಿರಗಸೂರು ಗ್ರಾಮದ ತೋಟಿ ಇನಾಂ ಜಮೀನುಗಳನ್ನ ಸಂಬಂಧಿಸಿದ ಫಲಾನುಭವಿಗಳ ಹೆಸರಿಗೆ ಖಾತೆ ಮಾಡಬೇಕು. ಮಲ್ಲಿಕ್ಯಾತನಹಳ್ಳಿ ನಿವಾಸಿಗಳಿಗೆ ಹಕ್ಕುಪತ್ರ ನೀಡಬೇಕು.  ಕೆಅರ್’ಎಸ್ ನಿಂದ ರೈತರ ಬೆಳೆಗಳಿಗೆ ನೀರು ಬಿಡಬೇಕು, ವಿದ್ಯುತ್ ಐಪಿ ಸೆಟ್ ಗಳಿಗೆ ಕನಿಷ್ಠ ಹತ್ತು ಗಂಟೆಗಳ ಕಾಲ ತ್ರೀಫೇಸ್ ಕರೆಂಟ್ ನೀಡಬೇಕೆಂದು
ಎಂದು ಒತ್ತಾಯಿಸಿದರು.

ಬರಗಾಲದ ಹಿನ್ನೆಲೆಯಲ್ಲಿ ಬೆಳೆ ನಷ್ಟ ಪರಿಹಾರ ನೀಡಿ, ಸಾಲ ಮನ್ನಾ ಮಾಡಿ, ರೈತರ ಆತ್ಮಹತ್ಯೆ ತಡೆಗಟ್ಟಬೇಕು.
ಜಾನುವಾರುಗಳಿಗೆ ಮೇವು, ಕುಡಿಯುವ ನೀರು ಹಾಗೂ ಜನಸಾಮಾನ್ಯರಿಗೆ ಹೆಚ್ಚುವರಿ ರೇಷನ್ ನೀಡಬೇಕು.
ಉದ್ಯೋಗ ಖಾತ್ರಿ ಯೋಜನೆಯಲ್ಲಿ ವರ್ಷಕ್ಕೆ 200 ದಿನ ಕೆಲಸ, ದಿನಕ್ಕೆ 600 ರೂ. ಕೂಲಿ ಹಣ ನೀಡಬೇಕು. ಕೂಲಿಕಾರರಿಗೆ ಪ್ರತಿವಾರ ಹಣ ಪಾವತಿಸಬೇಕು. ಬರ ಪರಿಹಾರವನ್ನು ಖುಷ್ಕಿ ಜಮೀನಿಗೆ ಹೆಕ್ಟೇರಿಗೆ 20,000 ರೂ., ತರಿ ಜಮೀನಿಗೆ ಹೆಕ್ಟೇರಿಗೆ 50,000 ರೂ. ಪರಿಹಾರವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡಬೇಕು ಒತ್ತಾಯಿಸಿದರು.

ಗೋಷ್ಠಿಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ಎನ್ ಲಿಂಗರಾಜಮೂರ್ತಿ, ರಾಜ್ಯ ಸಮಿತಿ ಸದಸ್ಯರಾದ ಪ್ರಮೀಳಾ, ಶಿವಕುಮಾರ್, ಮಹಾದೇವು ಹಾಗೂ ಪ್ರಕಾಶ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!