Friday, April 19, 2024

ಪ್ರಾಯೋಗಿಕ ಆವೃತ್ತಿ

ಪಿಎಸ್ಐ ಅಕ್ರಮ ನೇಮಕಾತಿ : ಸಿದ್ದರಾಮಯ್ಯ ವಾಗ್ದಳಿ

ಪಿಎಸ್ಐ ನೇಮಕಾತಿ ಹಗರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು ಎಂದರೆ, ಆರೋಪಿತ ಅಧಿಕಾರಿಗಳಿಗೆ ರಕ್ಷಣೆ ನೀಡುತ್ತಿರುವ ಗೃಹ ಸಚಿವ ಆರಗ ಜ್ಞಾನೇಂದ್ರರನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಹಗರಣದ ಆರೋಪಿಗಳನ್ನು ಬಿಜೆಪಿ ಸರ್ಕಾರ ರಕ್ಷಣೆ ಮಾಡುತ್ತಿದೆ. ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕಾದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವೈಫಲ್ಯಗಳ ಸರದಾರ ಆರಗ ಜ್ಞಾನೇಂದ್ರರನ್ನು ತಕ್ಷಣ ಸಚಿವ ಸ್ಥಾನದಿಂದ ರಾಜೀನಾಮೆ ಕೊಟ್ಟು ಇಳಿಸಬೇಕು.

ಪಿಎಸ್ಐ ಅಕ್ರಮ ನೇಮಕಾತಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಒಪ್ಪಿಕೊಂಡ ಅವರು, ಯಾವ ನೈತಿಕತೆಯ ಆಧಾರದಲ್ಲಿ ಸಚಿವ ಸ್ಥಾನವನ್ನು ಮುಂದುವರಿಸಲು ಸಾಧ್ಯ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದ್ಯದ ಪರಿಸ್ಥಿತಿ ನೋಡಿದರೆ ಪಿಎಸ್ಐ ನೇಮಕಾತಿ ಹಗರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಲಾರದು ಎಂಬಂತೆ ಕಾಣುತ್ತದೆ. ಈ ಪ್ರಕರಣದ ಕುರಿತು ಹೈಕೋರ್ಟ್ ನ್ಯಾಯಮೂರ್ತಿಗಳ ಮೇಲುಸ್ತುವಾರಿಯಲ್ಲಿ ತನಿಖೆ ನಡೆಸುವುದು ಒಂದೇ ಪರಿಹಾರ ಎಂದು ಹೇಳಿದರು.

ಕರ್ನಾಟಕ ಸರ್ಕಾರ ನೇಮಕಾತಿ ಪರೀಕ್ಷೆಯನ್ನು  ಯಾವ ಆಧಾರದಲ್ಲಿ ನಡೆಸುವ ತೀರ್ಮಾನವನ್ನು ತೆಗೆದು ಕೊಂಡಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟನೆ ಕೊಡಬೇಕು.   ಹಗರಣದ  ತನಿಖೆಯಿಂದ ಏನು ವರದಿಯಾಗಿದೆ ಎಂದು ವರದಿ ಬಿಡುಗಡೆ ಮಾಡಿ ಎಂದು ಸವಾಲು ಹಾಕಿದರು.

ಪಿಎಸ್ಐ ನೇಮಕಾತಿ ಹಗರಣವನ್ನು ಕಾಂಗ್ರೆಸ್ ಪಕ್ಷ ಬಯಲು ಮಾಡಿದಾಗ , ಬಾಯಿಗೆ ಬಂದಂತೆ ತಲೆಗೊಬ್ಬರಂತೆ ಮಾತನಾಡಿದ ಬಿಜೆಪಿ ನಾಯಕರು ಈಗ ಯಾವ ಬಿಲದಲ್ಲಿ ಅಡಗಿ ಕುಳಿತಿದ್ದಾರೆ ಎಂದು ವ್ಯಂಗ್ಯವಾಡಿದರು.

ಭ್ರಷ್ಟಾಚಾರ ಅಪ್ರಾಮಾಣಿಕತೆ ಮತ್ತು ಪ್ರಶ್ನಿಸದೇ ಇದ್ದರೆ ಕೊನೆಗೆ ಈ ಪಿಡುಗಿಗೆ ಬಹುಸಂಖ್ಯೆಯಲ್ಲಿರುವ ಪ್ರಾಮಾಣಿಕರೇ ಕಷ್ಟ ನಷ್ಟ ಅನುಭವಿಸುತ್ತಾರೆ ಎನ್ನುವುದಕ್ಕೆ ಪಿಎಸ್ಐ ಅಕ್ರಮ ಸಾಕ್ಷಿ ಎಂದು ಹೇಳಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!