Wednesday, November 18, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಅಕ್ರಮ ರಸ್ತೆ ತೆರವಿಗೆ ಆಗ್ರಹಿಸಿ ಪ್ರತಿಭಟನೆ

ಮಂಡ್ಯ ನಗರದ ಹಾಲಹಳ್ಳಿ ಸ್ಲಂ ಬೋರ್ಡ್ ಬಡಾವಣೆಯಲ್ಲಿ ದೇವಾಲಯದ ಮುಂಭಾಗದಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ ಮಾಡಿದ್ದು, ತೆರವುಗೊಳಿಸುವಂತೆ ಒತ್ತಾಯಿಸಿ ಭಜರಂಗ ಸೇನೆ ನೇತೃತ್ವದಲ್ಲಿ ಸ್ಥಳೀಯ ನಿವಾಸಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಮಂಡ್ಯ ನಗರದ ಸರ್ ಎಂ ವಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿ ಅಕ್ರಮ ರಸ್ತೆ ತೆರವಿಗೆ ಒತ್ತಾಯಿಸಿದರು.

ಹಾಲಹಳ್ಳಿ ಸ್ಲಂ ಬೋರ್ಡ್ ನಲ್ಲಿ ಕರು ಮಾರಿಯಮ್ಮ ದೇವಾಲಯ ಇದ್ದು, ದೇವಸ್ಥಾನದ ಪಕ್ಕದ ಜಾಗದಲ್ಲಿ ಮಸೀದಿ ನಿರ್ಮಾಣಕ್ಕಾಗಿ ಜಾಗ ಖರೀದಿ ಮಾಡಿದ್ದಾರೆ.ಆ ಜಾಗಕ್ಕೆ ಹೋಗಲು ಖಾಸಗಿ ರಸ್ತೆ ಇದ್ದರೂ ಸಹ ಸರ್ಕಾರಿ ಜಾಗದಲ್ಲಿ ದೇವಾಲಯದ ಮುಂಭಾಗ ಅಕ್ರಮವಾಗಿ ರಸ್ತೆ ನಿರ್ಮಿಸಿ ಕಾಂಕ್ರೀಟ್ ಡೆಕ್ ಹಾಕಿದ್ದಾರೆ ಎಂದು ದೂರಿದರು.ಕೊಳಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳು ಸುಮ್ಮನಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭಜರಂಗ ಸೇನೆಯ ಬಿ.ಮಂಜುನಾಥ್, ಬಿಜೆಪಿ ಮುಖಂಡರಾದ ವಿವೇಕ್,ವಸಂತ್,ಹರ್ಷ, ಶಿವು, ಚೆಲುವರಾಜು, ಕೃಷ್ಣ ಶೆಟ್ಟಿ, ಸತೀಶ್ ಕುಮಾರ್, ಅನಿಲ್ ನೇತೃತ್ವ ವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ