ಶ್ರೀರಂಗಪಟ್ಟಣ ತಾಲೂಕು ನಗುವನಹಳ್ಳಿ-ಬೆಳವಾಡಿ ರಸ್ತೆಯ ಬೆಳವಾಡಿ ಗೇಟ್ ಬಳಿ ವ್ಯಕ್ತಿಯೊಬ್ಬ ಪ್ಯಾಸೆಂಜರ್ ಆಟೋದಲ್ಲಿ ಅಕ್ರಮವಾಗಿ ಸುಮಾರು 22 ಲೀಟರ್ ಸೇಂದಿ ಸಾಗಣಿ ಮಾಡುತ್ತಿದ್ದಾಗ ಅಬಕಾರಿ ಪೊಲೀಸರು ದಾಳಿ ನಡೆಸಿ, ಆತನನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿ ಶಿವಕುಮಾರ್ ಬಿನ್ ಕೆಂಚಯ್ಯ ಎಂಬುವನ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
ಮೈಸೂರು ವಿಭಾಗ ಅಬಕಾರಿ ಜಂಟಿ ಆಯುಕ್ತ ಬಸವರಾಜು ಹಡಪದ, ಮಂಡ್ಯ ಜಿಲ್ಲಾ ಅಬಕಾರಿ ಉಪ ಆಯುಕ್ತ ಡಾ. ಆರ್ ನಾಗಶಯನ ಇವರ ನಿರ್ದೇಶನದಂತೆ ಅಕ್ರಮವಾಗಿ ಸೇಂದಿ ಸಾಗಣೆ ಮಾಡುತ್ತಿದ್ದ ವ್ಯಕ್ತಿಯಲ್ಲಿ ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.




