Friday, November 20, 2026

ಪ್ರಾಯೋಗಿಕ ಆವೃತ್ತಿ

ಆಮದು ಸುಂಕ ಕಡಿತ | ರೈತರ ಮೇಲಿನ ದುಷ್ಪರಿಣಾಮ ಕುರಿತು ವಿಚಾರ ಸಂಕಿರಣ

ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಸಾಮ್ರಾಜ್ಯಶಾಹಿ ದೇಶಗಳ ಆಮದು ಸುಂಕ ಕಡಿತದ ಒತ್ತಡ ಮತ್ತು ಕರ್ನಾಟಕ ರಾಜ್ಯದ ರೈತರ ಮೇಲಿನ ದುಷ್ಪರಿಣಾಮಗಳ ಕುರಿತು ರಾಜ್ಯಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಜೂನ್ 14ರಂದು ಬೆಳಿಗ್ಗೆ 10.30ಕ್ಕೆ ಮಂಡ್ಯನಗರದ ಕರ್ನಾಟಕ ಸಂಘದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾ ಸಂಚಾಲಕ ಎನ್.ಎಲ್.ಭರತ್‌ರಾಜ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮ್ರಾಜ್ಯ ಶಾಹಿ ರಾಷ್ಟ್ರಗಳ ಉತ್ಪನ್ನಗಳ ಸುಂಕ ರಹಿತ ಆಮದಿನಿಂದಾಗಿ ಭಾರತ ದೇಶ ಹಾಗೂ ಕರ್ನಾಟಕ ರಾಜ್ಯದ ರೈತರು ಹಾಗೂ ಕೃಷಿ ರಕ್ಷಣೆಗೆ ಇರುವ ಆಮದು ಸುಂಕ ಮುಂದುವರಿಸಬೇಕಾಗಿದೆ ಎಂದರು.

ಕೇಂದ್ರ ಸರ್ಕಾರವು ಅಮೆರಿಕ ಸೇರಿದಂತೆ ಮುಂತಾದ ಸಾಮ್ರಾಜ್ಯಶಾಹಿ ರಾಷ್ಟ್ರಗಳ ಒತ್ತಡಕ್ಕೆ ಮಣಿಯುತ್ತಿರುವುದು ಕಂಡು ಬರುತ್ತಿದೆ. ವಿಚಾರ ಸಂಕಿರಣದ ಮೂಲಕ ರೈತರ ಮೇಲೆ ವಿನಾಶಕಾರಿ ಪರಿಣಾಮಗಳು ಉಂಟಾಗಬಹುದಾ ಗಿದ್ದು, ದೇಶದ ಅದರಲ್ಲೂ ರಾಜ್ಯದ ಕೃಷಿ ಉತ್ಪನ್ನಗಳ ರಫ್ತಿಗೆ ತೊಂದರೆ ಉಂಟುಮಾಡುವುದು ಸಾಮ್ರಾಜ್ಯಶಾಹಿ ದೇಶಗಳ ಪಿತೂರಿ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದರು.

ವಿಚಾರ ಸಂಕಿರಣದಲ್ಲಿ ಅಖಿಲ ಭಾರತ ಕಿಸಾನ್ ಸಭಾದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಹಾಗೂ ಅಖಿಲ ಭಾರತ ಕಬ್ಬು ಬೆಳಿಗಾರರ ಸಂಘದ ರಾಷ್ಟ್ರೀಯ ಅಧ್ಯಕ್ಷ ಕಾಂ.ಡಿ.ರವೀಂದ್ರನ್ ಉದ್ಘಾಟಿಸಲಿದ್ದು, ಕೃಷಿ ಅರ್ಥಶಾಸ್ತ್ರಜ್ಞ, ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಡಾ.ಪ್ರಕಾಶ್ ಕಮ್ಮರಡಿ, ಕೆಪಿಆರ್‌ಎಸ್ ರಾಜ್ಯಾಧ್ಯಕ್ಷ ಕಾಂ.ಯು.ಬಸವರಾಜ್, ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಂ.ಟಿ.ಯಶವಂತ ವಿಷಯದ ಕುರಿತು ಮಾತನಾಡಿಲಿದ್ದಾರೆ ಎಂದು ವಿವರಿಸಿದ ಅವರು, ಇದೇ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಸಮಿತಿ ಸಭೆಯನ್ನು ನಡೆಸಲಾಗುವುದು ಎಂದು ವಿವರಿಸಿದರು.

ಗೋಷ್ಠಿಯಲ್ಲಿ ಸಂಘದ ಎನ್.ಲಿಂಗರಾಜಮೂರ್ತಿ, ಸತೀಶ್, ಗುರುಸ್ವಾಮಿ, ಕುಳ್ಳೇಗೌಡ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ