ತರಬೇತಿಗೆ ಅರ್ಜಿ ಆಹ್ವಾನ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು, ನಾದಸ್ವರ, ಸಂಗೀತ ಕಲೆಗಳಿಗೆ 4 ವರ್ಷದ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯದಲ್ಲಿ ಉಚಿತ ಊಟ, ವಸತಿ, ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ನೀಡಲಾಗುವುದು.
ಆಸಕ್ತಿಯುಳ್ಳ ಅಭ್ಯರ್ಥಿ ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಯ ಜಿಲ್ಲಾ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಯಿಂದ ಪಡೆದು ಭರ್ತಿಮಾಡಿ ಮೇ.31 ರೊಳಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಸಲ್ಲಿಸಬಹುದು.
ಶಾಲಾ ಶುಲ್ಕ ನಿಗಧಿ ಪಡಿಸಿ ಸೂಚನ ಫಲಕದಲ್ಲಿ ಪ್ರಕಟಿಸಿ
ಜಿಲ್ಲೆಯಲ್ಲಿ 2022-23 ನೇ ಶೈಕ್ಷಣಿಕ ಸಾಲು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನ ರಹಿತ ಪ್ರಾಥಮಿಕ ಫ್ರೌಢಶಾಲಾ ಮುಖ್ಯಸ್ಥರುಗಳು ನಿಯಮಾನುಸಾರ ಶುಲ್ಕವನ್ನು ನಿಗಧಿಪಡಿಸಿಕೊಂಡು ತಮ್ಮ ಶಾಲೆಯ ಸೂಚನಾ ಫಲಕದಲ್ಲಿ ಮತ್ತು ವೆಬ್‍ಸೈಟ್‍ನಲ್ಲಿ ಕಡ್ಡಾಯವಾಗಿ ಪ್ರಕಟಿಸುವಂತೆ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.