✍🏿ವರದಿ: ವಿ.ಎಸ್. ಪ್ರಭು
ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯ ನೆರವಿಗೆ ಧಾವಿಸಿದ ಶಾಸಕ ಡಿ.ಸಿ.ತಮ್ಮಣ್ಣ ತಮ್ಮ ವಾಹನದಲ್ಲಿಯೇ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಕಳುಹಿಸುವ ಮೂಲಕ ಮಾನವೀಯತೆ ಮೆರೆದರು.
ಮದ್ದೂರು ತಾಲೂಕಿನ ಮದ್ದೂರು – ತುಮಕೂರು ರಾಜ್ಯ ಹೆದ್ದಾರಿಯ ಛತ್ರಲಿಂಗನದೊಡ್ಡಿ ಗೇಟ್ ಬಳಿ ಇಂದು ಬೆಳಿಗ್ಗೆ ಮದ್ದೂರು ತಾಲ್ಲೂಕಿನ ಆತಗೂರು ಹೋಬಳಿಯ ಸಿದ್ದೇಗೌಡನದೊಡ್ಡಿ ಗ್ರಾಮದ ಮರಿಯಪ್ಪ (63) ಎಂಬುವವರು ದ್ವಿಚಕ್ರ ವಾಹನದಲ್ಲಿ ತೆರಳುವಾಗ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಗಾಯಗೊಂಡಿದ್ದರು.
ಇದೇ ವೇಳೆ ಜನ ಸಂಪರ್ಕ ಸಭೆಯಲ್ಲಿ ಭಾಗಿಯಾಗಿದ್ದ ಶಾಸಕ ಡಿ.ಸಿ. ತಮ್ಮಣ್ಣ ಅವರಿಗೆ ವಿಷಯ ತಿಳಿಯಿತು. ಕೂಡಲೇ ಅಪಘಾತದ ಸ್ಥಳಕ್ಕೆ ಧಾವಿಸಿದ ಡಿ.ಸಿ.ತಮ್ಮಣ್ಣನವರು ಗಾಯಗೊಂಡಿದ್ದ ಮರಿಯಪ್ಪ ಅವರ ಆರೋಗ್ಯ ವಿಚಾರಿಸಿ ಧೈರ್ಯ ತುಂಬುವ ಜೊತೆಗೆ ತಮ್ಮ ಕಾರಿನಲ್ಲೇ ಸ್ಥಳೀಯ ಆಸ್ಪತ್ರೆಗೆ ತೆರಳಲು ಅನುಕೂಲ ಕಲ್ಪಿಸುವ ಮೂಲಕ ನೆರೆದಿದ್ದ ಗ್ರಾಮಸ್ಥರು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು.




