Thursday, September 19, 2024

ಪ್ರಾಯೋಗಿಕ ಆವೃತ್ತಿ

ಸಾಂಸ್ಕೃತಿಕ ಸ್ಫರ್ಧೆಯಲ್ಲಿ ಕೆ.ಆರ್.ಪೇಟೆ ವಿದ್ಯಾರ್ಥಿಗಳ ಸಾಧನೆ

ಮಂಡ್ಯದಲ್ಲಿ ಅನಿಕೇತನ ಪದವಿ ಪೂರ್ವ ಕಾಲೇಜು ಇವರ ವತಿಯಿಂದ ಶನಿವಾರ ನಡೆದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ 2022-23 ಸಾಲಿನ ಸಾಂಸ್ಕೃತಿಕ ಸ್ಫರ್ಧೆಯಲ್ಲಿ ಕೆ.ಆರ್.ಪೇಟೆ ತಾಲ್ಲೂಕಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.

ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಎಂ.ರಮ್ಯಾ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಿ.ಜಿ.ಎಸ್ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿಯ ಆಕಾಶ್ ಎಚ್.ಸಿ ಮತ್ತು ಮತ್ತು ಪ್ರಜ್ವಲ್ ಬಿ.ಎಂ.ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕೆಪಿಎಸ್ ಕೆ.ಆರ್. ಪೇಟೆ ಕಾಲೇಜಿನ ದಿವ್ಯ ಆರ್.ಜೆ.ಚಿತ್ರಕಲೆ ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಪಡೆದರೆ, ಕದಂಬ ಪಿಯು ಕಾಲೇಜಿನ ಪ್ರಥಮ ಪಿಯುಸಿಯ ಪ್ರೀತಿ ಎಸ್.ಎಂ. ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದರೆ, ಪ್ರಥಮ ಪಿಯುಸಿಯ ಚಿನ್ಮಯಿ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದೇ ಕಾಲೇಜಿನ ದ್ವಿತೀಯ ಪಿಯುಸಿಯ ಮಮತ ಎಂ.ಕೆ. ಕನ್ಬಡ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ.

ಕೆ.ಆರ್.ಪೇಟೆ ಟೌನಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿಯ ಜೀವನ್ ಎಚ್.ಎಂ. ಭಾವಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದೇ ಕಾಲೇಜಿನ ದ್ವಿತೀಯ ಪಿಯುಸಿಯ ಮಿಥುನ್ ರಾಜ್ ಚಿತ್ರಕಲೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ, ಪ್ರಥಮ ಪಿಯುಸಿಯ ದೀಪಿಕಾ ಏಕಾಪಾತ್ರಾಭಿನಯದಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ.

ಬಲ್ಲೇನಹಳ್ಳಿ ಕಾಲೇಜಿನ ದ್ವಿತೀಯ ಪಿಯುಸಿಯ ಹರ್ಷಿತ್ ಗೌಡ ಎಂ.ಪಿ. ಮತ್ತು ಸಂಜಯ್ ಬಿ.ಆರ್.ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಗಳಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾದರು. ವಿಭಾಗ ಮಟ್ಟಕ್ಕೆ ಅಯ್ಕೆಯಾಗಿರುವ ಎಲ್ಲಾ ವಿದ್ಯಾರ್ಥಿಗಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಉಮೇಶ್, ಪ್ರಾಂಶುಪಾಲರ ಸಂಘದ ಅಧ್ಯಕ್ಷ ನಾಗರಾಜು, ಖಜಾಂಚಿ ಗುರುಲಿಂಗೇಗೌಡ ಮತ್ತು ಉಪನ್ಯಾಸಕರ ಸಂಘದ ಜಿಲ್ಲಾ ಅಧ್ಯಕ್ಷ  ನಾಗೇಶ್ ಅಭಿನಂದನೆ ಸಲ್ಲಿಸಿದ್ದಾರೆ. ವಿಭಾಗ ಮಟ್ಟದ ಸ್ಪರ್ಧೆಯು ನ.30 ರಂದು ಹಾಸನ ಜಿಲ್ಲೆಯಲ್ಲಿ ಜರುಗಲಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!