Tuesday, September 17, 2024

ಪ್ರಾಯೋಗಿಕ ಆವೃತ್ತಿ

ಶಿಕ್ಷಣ ಸಂಸ್ಥೆಗಳಲ್ಲಿ ಕಾಮನ್ ಡ್ರೆಸ್ ಕೋಡ್ : ಸುಪ್ರೀಂ ಕೋರ್ಟ್ ನಿರಾಕರಣೆ

ದೇಶದ ಎಲ್ಲಾ ನೋಂದಾಯಿತ ಮತ್ತು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಕಾಮನ್ ಡ್ರೆಸ್ ಕೋಡ್ ಕೋರಿ, ಕೇಂದ್ರ ಸರ್ಕಾರ ಮತ್ತು ಸಂಸತ್ತಿಗೆ ನಿರ್ದೇಶನ ನೀಡುವಂತೆ ಸಲ್ಲಿಸಲಾದ ಅರ್ಜಿಯನ್ನು, ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಗೌರವ್ ಭಾಟಿಯಾ, ಇದು ಸಾಂವಿಧಾನಿಕ ಸಮಸ್ಯೆ ಮತ್ತು ಶಿಕ್ಷಣ ಹಕ್ಕು ಕಾಯಿದೆ 2009ರ ಆಶಯಕ್ಕೆ ವಿರುದ್ಧವಾಗಿದೆ ಎಂದು ನ್ಯಾಯಾಲಯದ ಮನವೊಲಿಸಲು ಪ್ರಯತ್ನಿಸಿದರು.

ಶಿಕ್ಷಣ ಸಂಸ್ಥೆಗಳ ಜಾತ್ಯತೀತ ಗುಣವನ್ನು ಕಾಪಾಡಲು ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಕಾಮನ್ ಡ್ರೆಸ್ ಕೋಡ್ ಅನ್ನು ಪರಿಚಯಿಸುವುದು ಬಹಳ ಅವಶ್ಯಕ ಎಂದು ಮನವಿಯಲ್ಲಿ ತಿಳಿಸಲಾಗಿತ್ತು.

ಈ ಕುರಿತು ಸುಪ್ರೀಂಕೋರ್ಟ್ ನ ನೂತನ ಮುಖ್ಯ ನ್ಯಾಯಮೂರ್ತಿ ಟಿಎಸ್ ಠಾಕೂರ್ ನೇತೃತ್ವದ ಪೀಠವು ಈ ವಿಷಯದ ಬಗ್ಗೆ ಮಸೂದೆಯನ್ನು ಮಂಡಿಸಲು ಸುಪ್ರೀಂಕೋರ್ಟ್ ಸಂಸತ್ತಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಕಾನೂನನ್ನು ಪರಿಗಣಿಸದೆ ಅಂತಹ ಅರ್ಜಿಗಳನ್ನು ಸಲ್ಲಿಸಿದರೆ ನ್ಯಾಯಾಲಯವು ಅಂಥವರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರ್ಜಿದಾರರಿಗೆ ಎಚ್ಚರಿಕೆ ನೀಡಿದೆ.

ತಾರತಮ್ಯಕ್ಕೆ ಒಳಗಾದವರು ಪರಿಹಾರಕ್ಕಾಗಿ ಮುಂದೆ ಬಂದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!