Thursday, September 19, 2024

ಪ್ರಾಯೋಗಿಕ ಆವೃತ್ತಿ

ಗುಜರಾತಿನಲ್ಲಿ ಅರಗ ಜ್ಞಾನೇಂದ್ರ – ಸ್ಯಾಂಟ್ರೋ ಮಧ್ಯೆ ನಡೆದ ಡೀಲಿಂಗ್ ಏನು : ಕಾಂಗ್ರೆಸ್ ಪ್ರಶ್ನೆ

ಗುಜರಾತಿನಲ್ಲಿ ಸ್ಯಾಂಟ್ರೋ ರವಿ ನಿಮ್ಮ ಮದ್ಯೆ ನಡೆದ ಡೀಲಿಂಗ್ ಏನು? ವರ್ಗಾವಣೆ ದಂಧೆಯ ಸಾಕ್ಷ್ಯಗಳನ್ನು ಮುಚ್ಚಿಡಲು ಒಪ್ಪಂದ ಮಾಡಿಕೊಂಡಿರಾ? ಆತನ ಬಳಿ ಇದ್ದ ಹಲವು ಸಚಿವರ ಸಿಡಿಗಳನ್ನ ವಶಪಡಿಸಿಕೊಳ್ಳಲು ಹೋಗಿದ್ರಾ? ಅಥವಾ ಹೈಕಮಾಂಡ್‌ಗೆ ಭೇಟಿ ಮಾಡಿಸಿ ಆತನಿಗೆ ಉನ್ನತ ಹುದ್ದೆ ಕೊಡಿಸಲು ಹೋಗಿದ್ರಾ? ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷವು ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.

“>

ಅರಗ ಜ್ಞಾನೇಂದ್ರ  ನಿನ್ನೆ ಗುಜರಾತಿಗೆ ಹೋಗಿರುತ್ತಾರೆ, ಸ್ಯಾಂಟ್ರೋ ರವಿಯೂ ಗುಜರಾತಿಗೆ ಹೋಗಿರುತ್ತಾನೆ. ಬಂಧನವೂ ಗುಜರಾತಿನಲ್ಲಿ. ರವಿ ಗೃಹಸಚಿವರೊಂದಿಗೆ ಅಲ್ಲಿಗೆ ಹೋಗಿದ್ದನೇ? ಅಲ್ಲಿ ಅವರಿಬ್ಬರ ನಡುವೆ ಒಪ್ಪಂದ ನಡೆದಿರಬಹುದೇ? ತಮ್ಮ ವಿರುದ್ದದ ಸಾಕ್ಷ್ಯ ನಾಶಕ್ಕಾಗಿ ಗುಜರಾತಿಗೆ ಹೋಗಿದ್ದರೆ? ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಪ್ರಶ್ನಿಸಿದೆ.

ನಿನ್ನೆ ಗೃಹಸಚಿವ ಅರಗ ಜ್ಞಾನೇಂದ್ರ ಅವರು ಗುಜರಾತಿನ ಅಹಮದಾಬಾದ್‌ಗೆ ತೆರಳಿದ್ದರು. ಇಂದು ಅದೇ ಗುಜರಾತಿನ ಅಹಮದಾಬಾದ್‌ನಲ್ಲಿ ಸ್ಯಾಂಟ್ರೋ ರವಿಯ ಬಂಧನ. ಇದು ಖಂಡಿತಾ ಕಾಕತಾಳೀಯವಲ್ಲ. ಸ್ಯಾಂಟ್ರೋ ರವಿಯ ವಿರುದ್ಧ ವರ್ಗಾವಣೆ ದಂಧೆಯ ವಿಚಾರವಾಗಿ ಸರ್ಕಾರ ಇನ್ನೂ ಪ್ರಕರಣ ದಾಖಲಿಸಲಿಲ್ಲ. ಆತನ ಬಂಧನವಾಗಿದ್ದು ಪತ್ನಿಯ ದೂರಿನ ಆಧಾರದಲ್ಲಿ ಹೊರತು ಸರ್ಕಾರದ ದೂರಿನಲ್ಲಿ ಅಲ್ಲ. ಆತನ ಎಲ್ಲಾ ವ್ಯವಹಾರಗಳನ್ನು, ಸರ್ಕಾರ, ಸಚಿವರ ಸಹಬಾಗಿತ್ವವನ್ನು ಲೋಕಾಯುಕ್ತ ಅಥವಾ ನ್ಯಾಯಾಂಗ ತನಿಖೆಗೆ ವಹಿಸಿದಲ್ಲಿ ಮಾತ್ರ ಸತ್ಯ ಹೊರಬರಲು ಸಾಧ್ಯ ಕಾಂಗ್ರೆಸ್ ಪ್ರತಿಕ್ರಿಯಿಸಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!