Friday, November 20, 2026

ಪ್ರಾಯೋಗಿಕ ಆವೃತ್ತಿ

ನರೇಗಾದಲ್ಲಿ ಕೂಲಿ ಕಾರ್ಮಿಕರಿಗೆ ಅನ್ಯಾಯ: ಪ್ರತಿಭಟನೆ

ಬಡವರ್ಗದ ಕೂಲಿ ಕಾರ್ಮಿಕರಿಗಾಗಿ ಸರ್ಕಾರ ಅನುಷ್ಠಾನಗೊಳಿಸಿರುವ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸಮರ್ಪಕವಾದ ಕೂಲಿ ಹಣ ನೀಡದೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ ನಡೆಸಿತು.

ನಾಗಮಂಗಲ ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಕಾರ್ಯಕರ್ತರು ಹರದನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆ (ನರೇಗಾ)ಯಲ್ಲಿ ಕೂಲಿ ಕಾರ್ಮಿಕರಿಗೆ ಸಮರ್ಪಕವಾದ ಹಣ ನೀಡದೆ ಇರುವುದನ್ನು ಖಂಡಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ ಮಾತನಾಡಿ, ಹರದನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸುಮಾರು 6 ಹಳ್ಳಿಗಳ ನೂರಕ್ಕೂ ಹೆಚ್ಚು ಮಂದಿ ನರೇಗಾದಲ್ಲಿ ಕೆಲಸ ಮಾಡುತ್ತಿದ್ದು, ಕೂಲಿ ಕಾರ್ಮಿಕರಿಗೆ ಸರಿಯಾದ ಹಣ ನೀಡದೆ ಅನ್ಯಾಯ ಮಾಡಿದ್ದಾರೆ.

ಪಿಡಿಓ, ಪಂಚಾಯತಿ ಸದಸ್ಯರುಗಳು ಸೇರಿ ಗುತ್ತಿಗೆ ಆಧಾರದಲ್ಲಿ ಕಾಮಗಾರಿಯನ್ನು ನೀಡುತ್ತಿದ್ದು, ನಮಗೆ ನ್ಯಾಯಯುತವಾಗಿ ಕೆಲಸ ನೀಡುವಂತೆ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಮಹಿಳಾ ಸಂಘಟನೆಯ ಪದಾಧಿಕಾರಿಗಳಾದ ಸುನೀತ ,ಪ್ರೇಮಮ್ಮ ಹಾಗೂ ಮಹಿಳಾ ಪದಾಧಿಕಾರಿಗಳು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ