ಅನಾರೋಗ್ಯದಿಂದ ಬಳಲುತ್ತಿರುವ ಒಂದು ವರ್ಷದ ಮಗುವನ್ನು ಚರ್ಚ್ ನಲ್ಲಿ ಮಲಗಿಸಿ ಪೋಷಕರು ನಾಪತ್ತೆಯಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಮಂಡ್ಯದ ಫ್ಯಾಕ್ಟರಿ ಸರ್ಕಲ್ ಬಳಿ ಇರುವ ಸೆಂಟ್ ಜಾನ್ಸ್ ಶಾಲೆಯ ಆವರಣದಲ್ಲಿರುವ ಕ್ಯಾಥೋಲಿಕ್ ಚರ್ಚ್ ನಲ್ಲಿ ಈ ಘಟನೆ ನಡೆದಿದೆ.
ಇಂದು ಬೆಳಗ್ಗೆ ಚರ್ಚ್ಗೆ ಮಗು ಕರೆತಂದಿದ್ದ ಇಬ್ಬರು ವ್ಯಕ್ತಿಗಳು ಬಳಿಕ ಚರ್ಚ್ ನ ಆವರಣದಲ್ಲಿ ಒಂದು ವರ್ಷದ ಗಂಡು ಮಗುವನ್ನು ಬಿಟ್ಟು ಹೋಗಿದ್ದಾರೆ. ಚರ್ಚ್ ಫಾದರ್ ಮಗುವನ್ನು ಪಡೆದು ಕೂಡಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದು ಚರ್ಚ್ ಬಳಿ ಬಂದ ಅಧಿಕಾರಿಗಳು ಅನಾರೋಗ್ಯದಿಂದ ಬಳಲುತ್ತಿರುವ ಮಗುವನ್ನು ಪಡೆದು ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.