Friday, November 20, 2026

ಪ್ರಾಯೋಗಿಕ ಆವೃತ್ತಿ

ಹವಾಮಾನ ವರದಿ | ಇಂದು ಯಾವ್ಯಾವ ಜಿಲ್ಲೆಯಲ್ಲಿ ಮಳೆಯಾಗಲಿದೇ… ಇಲ್ಲಿದೆ ಮಾಹಿತಿ…..

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರದಲ್ಲಿ ಇಂದು ಮಳೆಯಾಗಲಿದೆ.

ವಿಜಯನಗರ, ತುಮಕೂರು, ಶಿವಮೊಗ್ಗ ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ವಿಜಯಪುರ, ಹಾವೇರಿ, ಗದಗ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಒಣಹವೆ ಮುಂದುವರೆಯಲಿದೆ. ಮದ್ದೂರು, ಯಲಹಂಕ, ಮಾಗಡಿ, ಬೆಂಗಳೂರು ಏರ್‌ಪೋರ್ಟ್, ಮಾಗಡಿ, ಚಿಂತಾಮಣಿ, ಸರಗೂರು, ನಾಗಮಂಗಲ, ರಾಯಲ್ಪಾಡು, ಬೇಲೂರು, ಜಿಕೆವಿಕೆ, ಎಲೆಕ್ಟ್ರಾನಿಕ್‌ಸಿಟಿ, ಎಂಎಂ ಹಿಲ್ಸ್ ಹೆಸರಘಟ್ಟ ನಾಪೋಕ್ಲುವಿನಲ್ಲಿ ಮಳೆಯಾಗಿದೆ.

ಕಲಬುರಗಿಯಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಬೆಳಗಾವಿ ವಿಮಾನ ನಿಲ್ದಾಣದಲ್ಲಿ 17.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್‌ಎಎಲ್‌ನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ನಗರದಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 219 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್‌ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 37.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ