Friday, May 17, 2024

ಪ್ರಾಯೋಗಿಕ ಆವೃತ್ತಿ

ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ: ಬೈಕ್ ಜಾಥಾ ಗೆ ಚಾಲನೆ

ಅಂತರಾಷ್ಟ್ರೀಯ ಸಿರಿಧಾನ್ಯ ಸಾವಯವ ಮೇಳ – 2024 ರ ಅಂಗವಾಗಿ ಇಂದು ಮಂಡ್ಯನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿರುವ ಸಿರಿಧಾನ್ಯ ಪಾಕಸ್ಪರ್ಧೆ, ರಾಗಿಮುದ್ದೆ ಊಟದ ಸ್ಪರ್ಧೆ ಮತ್ತು ಆಹಾರ ಮೇಳ ಒಳಗೊಂಡಂತೆ ಸಿರಿಧಾನ್ಯ ಹಬ್ಬ ಕುರಿತಂತೆ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಾಗೃತಿ ಅರಿವು ಮೂಡಿಸುವ ಬೈಕ್ ರ್‍ಯಾಲಿಗೆ ಅಪರ ಜಿಲ್ಲಾಧಿಕಾರಿ ಡಾ. ಎಚ್ ಎಲ್ ನಾಗರಾಜು ಚಾಲನೆ ನೀಡಿದರು.

ಸಿರಿಧಾನ್ಯ ಮೇಳ ಯಶಸ್ವಿಯಾಗಿ ನಡೆಯಲೆಂದು ಬೈಕ್ ಜಾಥಾವನ್ನು ಹಮ್ಮಿಕೊಂಡಿದ್ದೇವೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಎಚ್ ಎಲ್ ನಾಗರಾಜು ತಿಳಿಸಿದರು. ವಿಶೇಷವಾಗಿ ಮಂಡ್ಯ ಜಿಲ್ಲೆಯು ಕೃಷಿ ಪ್ರಧಾನ ಜಿಲ್ಲೆಯಾಗಿರುವುದರಿಂದ ಸಿರಿಧಾನ್ಯ ಬೆಳೆಯುವರ ಸಂಖ್ಯೆಯನ್ನು ಹೆಚ್ಚು ಮಾಡಬೇಕು ಎಂದರು.

ಮಕ್ಕಳ , ಗರ್ಭಿಣಿ ಮಹಿಳೆಯರಿಗೆ ಪೌಷ್ಠಿಕಾಂಶವನ್ನು ಹೆಚ್ಚಿಸಲು ಸಿರಿಧಾನ್ಯಗಳು ಬಹಳ ಮುಖ್ಯ. ಮನಸ್ಸು ಮತ್ತು ದೇಹವನ್ನು ಸದೃಢವಾಗಿ ಇಟ್ಟುಕೊಳ್ಳಲು ಸಿರಿಧಾನ್ಯಗಳು ಬೇಕು ಎಂದರು.

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ ವಿ.ಎಸ್ ಅಶೋಕ್, ಉಪ ನಿರ್ದೇಶಕಿ ಮಾಲತಿ , ಸಹಾಯಕ ನಿರ್ದೇಶಕಿ ಸೌಮ್ಯಶ್ರೀ ಹಾಗೂ ಇನ್ನಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!