ಮಂಡ್ಯ ಜಿಲ್ಲೆಯ ಉಪವಿಭಾಗಾಧಿಕಾರಿ ಹಾಗೂ ತಾಲ್ಲೂಕು ಕಚೇರಿಗಳಲ್ಲಿ E-Office ಮೂಲಕ ಕಾರ್ಯ ನಿರ್ವಹಿಸುವ ವಿಧಾನಕ್ಕೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಇಂದು ಮಂಡ್ಯ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಚಾಲನೆ ನೀಡಿದರು.

ಇ- ಆಫೀಸ್ ನಿಂದ ಕಡತಗಳ ನಿರ್ವಾಹಣೆ ಹಾಗೂ ವಿಲೇವಾರಿ ಬೇಗ ಮಾಡಲು ಅನುವಾಗಲಿದೆ. ಜಿಲ್ಲಾಧಿಕಾರಿಗಳು ತಮ್ಮ ಮೊಬೈಲ್ ನಲ್ಲಿ ಕಡತಗಳು ಯಾವ ಹಂತದಲ್ಲಿದೆ, ಎಲ್ಲಿ ತಡವಾಗಿದೆ ಎಂದು ತಿಳಿದುಕೊಳ್ಳಬಹುದು. ಇದರಿಂದ ಸಾರ್ವಜನಿಕರ ಕಡತಗಳ ವಿಲೇವಾರಿ ಬೇಗ ಅಗಲಿದೆ ಎಂದರು.

ತಹಶೀಲ್ದಾರ್ ಕಚೇರಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿಗೆ ಕಡತಗಳ ನಿರ್ವಹಣೆ ಇದ್ದರೆ ಆನ್ ಲೈನ್ ನಲ್ಲಿ ಇ- ಆಫೀಸ್ ಮೂಲಕ ನಡೆಯಲಿದೆ. ಇದರಿಂದ ಜಿಲ್ಲಾಧಿಕಾರಿಗಳು ನೇರವಾಗಿ ಮತ್ತು ಸುಲಭವಾಗಿ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಶಾಸಕ ರವಿಕುಮಾರ್, ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ: ಕುಮಾರ,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್ ನಾಗರಾಜ್, ಉಪವಿಭಾಗಾಧಿಕಾರಿ ಶಿವಮೂರ್ತಿ, ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.




