Thursday, September 26, 2024

ಪ್ರಾಯೋಗಿಕ ಆವೃತ್ತಿ

ಮೈಸೂರು ದಸರಾ ಉದ್ಘಾಟನೆಗೆ ಪ್ರೊ.ಹಂ.ಪ. ನಾಗರಾಜಯ್ಯ ಅವರಿಗೆ ಆಹ್ವಾನ

ಮೈಸೂರು ಜಿಲ್ಲಾಡಳಿತ ವತಿಯಿಂದ ಹೆಸರಾಂತ ಸಂಶೋಧಕರು, ಸಾಹಿತಿಗಳಾದ ಪ್ರೊ.ಹಂ.ಪ. ನಾಗರಾಜಯ್ಯ ಅವರನ್ನು ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಗುರುವಾರ ಆಹ್ವಾನಿಸಲಾಯಿತು.

ಹಂಪನಾ ಅವರ ಬೆಂಗಳೂರಿನ ಕ್ರಸೆಂಟ್ ರಸ್ತೆಯ ಅಮೆರಿಕನ್ ಕಾಲೋನಿಯಲ್ಲಿರುವ ಅವರ ನಿವಾಸಕ್ಕೆ ಆಗಮಿಸಿ ಆಹ್ವಾನ ಕೋರಲಾಯಿತು. ಮೈಸೂರು ಪೇಟ ತೊಡಿಸಿ, ಫಲಫುಷ್ಪದೊಂದಿಗೆ ಆಮಂತ್ರಣ ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಪಂ ಸಿಇಒ ಕೆ.ಎಂ.ಗಾಯತ್ರಿ, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜ್, ಚಾಮುಂಡಿ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ.ರೂಪಾ ಮತ್ತು ಸ್ವಾಗತ ಸಮಿತಿಯ ಎಲ್ಲ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!