Friday, September 20, 2024

ಪ್ರಾಯೋಗಿಕ ಆವೃತ್ತಿ

ರಾಮಮಂದಿರ ಉದ್ಘಾಟನೆ ಗಿಮಿಕ್ ಶೋ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

ಲೋಕಸಭೆ ಚುನಾವಣೆಗೆ ಮುನ್ನ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡುವ ಮೂಲಕ ಬಿಜೆಪಿ ಗಿಮಿಕ್ ಶೋನಲ್ಲಿ ತೊಡಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ‘ಇತರ ಸಮುದಾಯಗಳನ್ನು ಹೊರಗಿಡುವ ಹಬ್ಬಗಳನ್ನು ನಾನು ಬೆಂಬಲಿಸುವುದಿಲ್ಲ’ ಎಂದು ಅವರು ಪ್ರತಿಪಾದಿಸಿದರು.

ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಜಾಯ್ನಗರದಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, ‘ಧಾರ್ಮಿಕತೆ ಆಧಾರದ ಮೇಲೆ ಜನಸಾಮಾನ್ಯರನ್ನು ವಿಭಜಿಸುವಲ್ಲಿ ನನಗೆ ನಂಬಿಕೆ ಇಲ್ಲ’ ಎಂದು ಹೇಳಿದರು.

‘ಎಲ್ಲ ಸಮುದಾಯದ ಜನರನ್ನು ಕರೆದುಕೊಂಡು ಹೋಗುವ ಮತ್ತು ಒಗ್ಗಟ್ಟಿನ ಬಗ್ಗೆ ಮಾತನಾಡುವ ಹಬ್ಬಗಳನ್ನು ನಾನು ನಂಬುತ್ತೇನೆ. ಬಿಜೆಪಿ ಇದನ್ನು (ರಾಮಮಂದಿರ ಉದ್ಘಾಟನೆ) ನ್ಯಾಯಾಲಯದ ಸೂಚನೆಯ ಮೇರೆಗೆ ಮಾಡುತ್ತಿದೆ. ಆದರೆ ಅದನ್ನು ಗಿಮಿಕ್ ಪ್ರದರ್ಶನವಾಗಿ ಲೋಕಸಭೆ ಚುನಾವಣೆಗೆ ಮುನ್ನ ಮಾಡುತ್ತಿದೆ’ ಎಂದು ಅವರು ಟೀಕಿಸಿದರು.

‘ಜನರನ್ನು ಧಾರ್ಮಿಕ ಆಧಾರದ ಮೇಲೆ ವಿಭಜಿಸುವುದರಲ್ಲಿ ನನಗೆ ನಂಬಿಕೆ ಇಲ್ಲ’ ಎಂದು ಅವರು ಹೇಳಿದರು. ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ 6,000 ಕ್ಕೂ ಹೆಚ್ಚು ಜನರು ‘ಪ್ರಾಣ ಪ್ರತಿಷ್ಠಾಪನಾ’ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!