ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ .ಚಲುವರಾಯಸ್ವಾಮಿ ಅವರು ಆ.5 ರಂದು ಬೆಳಿಗ್ಗೆ 11 ಗಂಟೆಗೆ ಮಂಡ್ಯ ನಗರದ ಡಾ.ಬಿ ಆರ್ ಅಂಬೇಡ್ಕರ್ ಭವನದಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡುವರು.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಾದ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯೂ ಕಳೆದ ಆ.1ರಿಂದಲೇ ರಾಜ್ಯಾದ್ಯಂತ ಜಾರಿಗೆ ಬಂದಿದ್ದು, ಮಂಡ್ಯದಲ್ಲಿ ನಾಳೆ ಸಚಿವರು ಸಾಂಕೇತಿಕ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದ ನಂತರ ಸಚಿವರು, ಮಧ್ಯಾಹ್ನ 2.15 ಗಂಟೆಗೆ ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿನ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಆನಂತರ ರಸ್ತೆಯ ಮೂಲಕ ಬೆಳ್ಳೂರು ಕ್ರಾಸ್- ಕುಣಿಗಲ್ -ನೆಲಮಂಗಲ ಮಾರ್ಗವಾಗಿ ಕೇಂದ್ರ ಸ್ಥಾನ ಬೆಂಗಳೂರಿಗೆ ತಲುಪುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.