Sunday, November 22, 2026

ಪ್ರಾಯೋಗಿಕ ಆವೃತ್ತಿ

ಶಿಕ್ಷಣ ಕ್ಷೇತ್ರಕ್ಕೆ ನೀಡುವ ಅನುದಾನ ಹೆಚ್ಚಿಸಿ : ಇಂಡುವಾಳು ಸಚ್ಚಿದಾನಂದ ಒತ್ತಾಯ

ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ನೀಡುವ ಅನುದಾನವನ್ನು ಮತ್ತಷ್ಟು ಹೆಚ್ಚಿಸಬೇಕು ಎಂದು ಬಿಜೆಪಿ ಮುಖಂಡ ಇಂಡುವಾಳು ಸಚ್ಚಿದಾನಂದ ಒತ್ತಾಯಿಸಿದರು.

ಶ್ರೀರಂಗಪಟ್ಟಣ ತಾಲ್ಲೂಕಿನ ಕೊಡಿಯಾಲ ಗ್ರಾಮದಲ್ಲಿ ಎನ್.ಶಂಕರೇಗೌಡ ಚಾರಿಟಬಲ್ ಟ್ರಸ್ಟ್ ವತಿಯಿಂದ, 2025-26 ನೇ ಸಾಲಿನಲ್ಲಿ ಸರ್ಕಾರಿ ಕೋಟದಡಿ ಎಂಬಿಬಿಎಸ್ ಸೀಟು ಪಡೆದಿರುವ ಗ್ರಾಮದ ಬಳ್ಳಾರಿಗೌಡ ಮತ್ತು ಸುಧಾ ಜಿ.ಪಿ. ಅವರ ಪುತ್ರಿ ಧನ್ಯಶ್ರೀ ಕೆ.ಬಿ ಅವರಿಗೆ ಶುಕ್ರವಾರ ಲ್ಯಾಪ್‌ಟಾಪ್ ವಿತರಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಸರ್ಕಾರಿ ಶಾಲೆ, ಕಾಲೇಜು ಕಟ್ಟಡಗಳು ಶಿಥಿಲಾವಸ್ಥೆಯಲ್ಲಿವೆ. ಪ್ರಯೋಗಶಾಲೆ, ಗ್ರಂಥಾಲಯ ಸೌಲಭ್ಯ ಕೂಡ ಸರಿಯಾಗಿಲ್ಲ. ಶಿಕ್ಷಕರು ಮತ್ತು ಉಪನ್ಯಾಸಕರ ಕೊರತೆಯೂ ಕಾಡುತ್ತಿದೆ. ಇದು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ತೊಡಕಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಶಿಕ್ಷಣ ತಜ್ಞರ ಸಮಿತಿ ರಚಿಸಿ ವಸ್ತುನಿಷ್ಠ ವರದಿ ಪಡೆಯಬೇಕು. ಸರ್ಕಾರಿ ಶಿಕ್ಷಣ ಸಂಸ್ಥೆಗಳ ಸಬಲೀಕರಣಕ್ಕೆ ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು.

ವಿಧಾನಸಭಾ ಕ್ಷೇತ್ರದಲ್ಲಿ, ಸರ್ಕಾರಿ ಕೋಟದಡಿ ಎಂಬಿಬಿಎಸ್ ಸೀಟು ಪಡೆದಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‌ಟಾಪ್ ನೀಡಲಾಗುತ್ತಿದೆ. ಅಂತಹ ವಿದ್ಯಾರ್ಥಿಗಳು ಖುದ್ದು ಸಂಪರ್ಕಿಸಿದರೆ ಅವರ ಮನೆ ಬಾಗಿಲಿಗೆ ತೆರಳಿ ಲ್ಯಾಪ್‌ಟಾಪ್ ವಿತರಿಸಲಾಗುವುದು ಎಂದು ಸಚ್ಚಿದಾನಂದ ತಿಳಿಸಿದರು.

ಬಿಜೆಪಿ ಮಂಡಲದ ಅಧ್ಯಕ್ಷ ಪೀಹಳ್ಳಿ ಎಸ್. ರಮೇಶ್, ಉಪಾಧ್ಯಕ್ಷ ಮೊಳ್ಳೇನಹಳ್ಳಿ ಚಂದ್ರು, ಅರಕೆರೆ ಹೋಬಳಿ ಘಟಕದ ಅಧ್ಯಕ್ಷ ಕಶ್ಯಪ್, ಮುಖಂಡರಾದ ಸಿದ್ದರಾಜು, ಸಚಿನ್, ಕೆ.ಬಿ. ಶಿವಕುಮಾರ್, ಪುಟ್ಟೇಗೌಡ, ಮೋಹನ್, ಜಗದೀಶ್, ಅಭಿ, ಪ್ರಭಾಕರ್, ಮುರಳಿ, ಶ್ಯಾಮ್, ಚೊಟ್ಟನಹಳ್ಳಿ ಗೋವಿಂದು, ದರ್ಶನ್, ಚಿಕ್ಕ ಹಾರೋಹಳ್ಳಿ ಮಂಜು, ಕೆ.ಬಿ. ಕುಮಾರ್, ದೇವೇಗೌಡ, ಶ್ರೀಧರ್, ಬುದ್ದಿ, ಉಮೇಶ್, ಜವರೇಗೌಡ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ