Tuesday, November 24, 2026

ಪ್ರಾಯೋಗಿಕ ಆವೃತ್ತಿ

ಹೆಚ್ಚಿದ ಕೋಮುಗಲಭೆ | ಮಂಡ್ಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಪಡೆ ಕಾರ್ಯಾರಂಭ

ರಾಜ್ಯದಾದ್ಯಂತ ಕಳೆದ ಮೂರು ವರ್ಷಗಳಲ್ಲಿ ಸಂಭವಿಸಿದ ಕೋಮುಗಲಭೆಗಳಲ್ಲಿ ಮಂಡ್ಯ ಜಿಲ್ಲೆಯಲ್ಲಿಯೇ ಹೆಚ್ಚು ಪ್ರಕರಣಗಳು ದಾಖಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

nudikarnataka.comವಿಧಾನ ಪರಿಷತ್ತಿನಲ್ಲಿ ಶಾಸಕ ಮಧು ಮಾದೇಗೌಡ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಅವರು, 2024, 2025 ಮತ್ತು 2026 ರವರೆಗೆ ರಾಜ್ಯದಲ್ಲಿ ನಡೆದಿರುವ ಕೋಮು ಘರ್ಷಣೆಗಳಿಗೆ (ಗಣೇಶ ಹಬ್ಬದ ಸಂದರ್ಭ ಸೇರಿದಂತೆ) ಸಂಬಂಧಿಸಿದಂತೆ ಒಟ್ಟು 70 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ ಮಂಡ್ಯ ಜಿಲ್ಲೆಯೊಂದರಲ್ಲೇ ಒಟ್ಟು 34 (ಶೇ 48.57) ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದ್ಧಾರೆ.

2024ರಲ್ಲಿ ನಾಗಮಂಗಲದಲ್ಲಿ 24 ಪ್ರಕರಣಗಳು ಹಾಗೂ 2025ರಲ್ಲಿ ಮದ್ದೂರು ಪೊಲೀಸ್ ಠಾಣೆಯಲ್ಲಿ 10 ಪ್ರಕರಣಗಳು ದಾಖಲಾಗಿವೆ. ಕೋಮು ಗಲಭೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಪಡೆ (Special Action Force) ಸೃಜಿಸಲಾಗಿದೆ ತಿಳಿಸಿದ್ದಾರೆ.

nudikarnataka.comರಾಜ್ಯದಲ್ಲಿ ಹೊಸದಾಗಿ ಸೃಜಿಸಲಾಗಿರುವ ಕಾರ್ಯಪಡೆಯ (Special Action Force) ಕೇಂದ್ರಸ್ಥಾನವನ್ನು ಮಂಗಳೂರಿನಲ್ಲಿ ಹಾಗೂ ವಿಶೇಷ ಕಾರ್ಯಪಡೆಯ 03 ಕಂಪನಿಗಳನ್ನು ಉಡುಪಿ, ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸ್ಥಾಪಿಸಲಾಗಿದೆ. ಬಳಿಕ ನ.26,2025 ರನ್ವಯ ವಿಶೇಷ ಕಾರ್ಯಪಡೆಯ 01 ಕಂಪನಿಯನ್ನು ಮಂಡ್ಯ ಜಿಲ್ಲೆಯಲ್ಲಿ ಸ್ಥಾಪಿಸಲಾಗಿದ್ದು, ವಿಶೇಷ ಕಾರ್ಯಪಡೆ ಹಾಗೂ ಪಡೆಯ ಅಧೀನದ ಕಂಪನಿಗಳು ಉಪ ಪೊಲೀಸ್ ಮಹಾನಿರೀಕ್ಷಕ ದರ್ಜೆಯ ಅಧಿಕಾರಿಯ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದ್ದಾರೆ.

ವಿಶೇಷ ಕಾರ್ಯಪಡೆ ಹಾಗೂ ಪಡೆಯ ಅಧೀನದಲ್ಲಿ 04 ಕಂಪನಿಗಳನ್ನು ರಚಿಸಿದ ಬಳಿಕ ಈ ಜಿಲ್ಲೆಗಳಲ್ಲಿ  ಹಲವು ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ದ್ವೇಷ ಭಾಷಣ, ಉದ್ರೇಕಕಾರಿ ಘಟನೆಗಳು ಮತ್ತು ಕೋಮು ಸಂಬಂಧಿತ ಘಟನೆಗಳಿಗಾಗಿ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳನ್ನು ಮತ್ತು ಗುಪ್ತಚರ ಮಾಹಿತಿಯನ್ನು ಸಂಗ್ರಹಿಸಲು ಮತ್ತು ಮೇಲ್ವಿಚಾರಣೆ ಮಾಡಲು ತಾಂತ್ರಿಕ ಕೋಶವನ್ನು ಒಳಗೊಂಡ ಗುಪ್ತಚರ ಘಟಕವನ್ನು ರಚಿಸಲಾಗಿದೆ. ಸಂಭಾವ್ಯ ಕೋಮು ಹಿಂಸಾಚಾರದ ಬಗ್ಗೆ ಕಣ್ಣಾವಲು ಮತ್ತು ಮಾನವ ಗುಪ್ತಚರ ಮೂಲಕ ಎಚ್ಚರಿಕೆ ವ್ಯವಸ್ಥೆಯನ್ನು ರಚಿಸಲಾಗಿದೆ ಎಂದಿದ್ದಾರೆ.

ಪ್ರಾಬಲ್ಯದ ಮೂಲಕ ವಿಶ್ವಾಸ ವೃದ್ಧಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮೂಲಭೂತೀಕರಣವನ್ನು ಗುರುತಿಸಲು ಮತ್ತು ಮೇಲ್ವಿಚಾರಣೆ ಮಾಡಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಹಾಗೂ ವಲಯ ಐ.ಜಿ.ಪಿ ರವರು ಕೋಮು ಗಲಭೆಯ ಸಂದರ್ಭಗಳಲ್ಲಿ ವಿಶೇಷ ಕಾರ್ಯಪಡೆ ಅಧಿಕಾರಿ/ಸಿಬ್ಬಂದಿಗಳನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿರುವ ಅವರು, ಕೋಮುಗಲಭೆ ನಿಗ್ರಹಕ್ಕಾಗಿ ಸೃಜಿಸಲಾದ ವಿಶೇಷ ಕಾರ್ಯಪಡೆಯಿಂದಾಗಿ ದ್ವೇಷ ಭಾಷಣ, ಉದ್ರೇಕಕಾರಿ ಘಟನೆಗಳು ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಶೇಷವಾಗಿ ಗಮನಹರಿಸಿ ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿದೆ ಎಂದು ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ