ಕಾಂಗ್ರೆಸ್ ಯುವ ಮುಖಂಡ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ ಜೋಡೋ ಯಾತ್ರೆ ಅ.3ರಂದು ಮಂಡ್ಯ ಜಿಲ್ಲೆಗೆ ಆಗಮಿಸಲಿದ್ದು, ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕಾಂಗ್ರೆಸ್ ಮುಖಂಡ ಸಿ.ಆರ್.ರಮೇಶ್ ಮನವಿ ಮಾಡಿದರು.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಐತಿಹಾಸಿಕ ಯಾತ್ರೆಯಲ್ಲಿ ಜನತೆ ಪಕ್ಷ ಬೇಧ ಮರೆತು ಭಾಗವಹಿಸಿ ತಮ್ಮ ಬೆಂಬಲ ನೀಡಬೇಕು. ಮುಖ್ಯವಾಗಿ ಪಾಂಡವಪುರ, ಶೀರಂಗಪಟ್ಟಣ ಹಾಗೂ ನಾಗಮಂಗಲ ವಿಧಾನಸಭಾ ಕ್ಷೇತ್ರಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕೋರಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಕೋ.ಪು.ಗುಣಶೇಖರ್ ಉಪಸ್ಥಿತರಿದ್ದರು.




