Thursday, September 19, 2024

ಪ್ರಾಯೋಗಿಕ ಆವೃತ್ತಿ

ಭಾರತೀಯ ಸಂಸ್ಕೃತಿ ಅಳವಡಿಸಿಕೊಂಡು ಮಾದರಿಯಾಗಿ : ಡಾ.ಅನ್ನದಾನಿ

ಭಾರತೀಯ ಸಂಸ್ಕೃತಿ ಅಳವಡಿಸಿಕೊಂಡು ಮಾದರಿಯ ಯಾಂತ್ರಿಕ ಬದುಕಿಗೆ ಮಾರು ಹೋಗದೇ, ಭಾರತೀಯ ಸಂಸ್ಕೃತಿಯನ್ನು ಅಳವಡಿಸಿಕೊಂಡು ಮಾದರಿಯಾಗಿ ಬದುಕಬೇಕೆಂದು ಶಾಸಕ ಡಾ.ಕೆ.ಅನ್ನದಾನಿ ತಿಳಿಸಿದರು.

ಮಳವಳ್ಳಿ ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕನ್ನಡ ರಾಜೋತ್ಸವ ಹಾಗೂ ಸಾಂಸ್ಕೃತಿಕ ಕ್ರೀಡಾ ಚಟುವಟಿಕೆಗಳ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಭಾಷೆ ಮಾತನಾಡುವವರ ಸಂಖ್ಯೆ ದಿನ ದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಕನ್ನಡ ನಾಡು ಎಲ್ಲಾ ಭಾಷಿಕರಿಗೆ ಆಶ್ರಯ ನೀಡುವ ರಾಜ್ಯವಾಗಿದೆ. ಆದರೆ ಬೇರೆ ರಾಜ್ಯಗಳಲ್ಲಿ ಇರುವ ಭಾಷೆಯ ಪ್ರೀತಿ ಕರ್ನಾಟಕದಲ್ಲಿ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಕನ್ನಡಿಗ ರಾದ ನಾವುಗಳು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ನಮ್ಮೆಲ್ಲರದಾಗಿದೆ ಎಂದರು.

1 ನೇತರಗತಿಯಿಂದ ಪದವಿವರೆಗೆ ಕನ್ನಡ ಭಾಷೆಯಲ್ಲಿ ಓದಿರುವ ವಿದ್ಯಾರ್ಥಿಗಳಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವಂತೆ ಸದನದಲ್ಲಿ ಧ್ವನಿ ಎತ್ತುವುದಲ್ಲದೇ, ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು. ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು .

ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಧ್ಯಾಪಕ ಪ್ರೊ.ಬೋರೇಗೌಡ, ಪ್ರಾಂಶುಪಾಲ ಮಹೇಶ್, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಡಾ.ಕೃಷ್ಣೇಗೌಡ ಹುಸ್ಕೂರು, ಕಸಾಪ ತಾಲ್ಲೂಕು ಅಧ್ಯಕ್ಷ ಚೇತನ್ ಕುಮಾರ್ ಸೇರಿದಂತೆ ಹಲವರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!