ಜನದನಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಕರ್ನಾಟಕ ಸಂಘದ ಸಹಕಾರದೊಂದಿಗೆ ಸಮಾಜ ಸೇವಾ ಪ್ರಶಸ್ತಿ, ವಿದ್ಯಾರ್ಥಿ ಪುರಸ್ಕಾರ ಮತ್ತು ಕ್ರೀಡಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆ.31ರ ಸಂಜೆ 5ಗಂಟೆಗೆ ಆಯೋಜಿಸಲಾಗಿದೆ ಎಂದು ಪ್ರದಾನ ಕಾರ್ಯದರ್ಶಿ ಚಂದಗಾಲು ಲೋಕೇಶ್ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 28ನೇ ವರ್ಷದ ದೇವಮ್ಮ ಇಂಡುವಾಳು ಎಚ್.ಹೊನ್ನಯ್ಯ ಮತ್ತು ಇಂಡುವಾಳು ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ, ಎಚ್.ಶಾರದಮ್ಮ ಮತ್ತು ಕೆಂಪಯ್ಯ ವಿದ್ಯಾರ್ಥಿ ಪುರಸ್ಕಾರ ಮತ್ತು 2ನೇ ವರ್ಷದ ಇಂಡುವಾಳು ಎಚ್.ಹೊನ್ನಪ್ಪ ಕ್ರೀಡಾ ಪ್ರಶಸ್ತಿಯನ್ನು ಮಂಡ್ಯ ನಗರದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ನಡೆಯಲಿದೆ ಎಂದರು.
ಆದಿಚುಂಚನಗರಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ವಿಶ್ವಮಾನವ ಕ್ಷೇತ್ರದ ಪುರುಷೋತ್ತಮಾನಂದನಾಥ ಸ್ವಾಮೀಜಿ ಸಾನಿಧ್ಯದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ವಿವಿಯ ವಿಶ್ರಾಂತ ಕುಲಪತಿ ಡಾ.ಎಂ.ಶೇಖರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮಾಜಿ ಶಾಸಕ ಎಂ.ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದು, ಇಂಡುವಾಳು ಎಚ್.ಹೊನ್ನಯ್ಯ ಅವರ ಪುತ್ರ ಹಾಗೂ ರೈತ ಹೋರಾಟಗಾರ ಎಚ್.ಚಂದ್ರಶೇಖರ್ ಉಪಸ್ಥಿತರಿರಲಿದ್ದಾರೆ ಎಂದು ಹೇಳಿದರು.
ಬೆಂಗಳೂರಿನ ಗ್ಯಾಸ್ಟ್ರೋ ಎಂಟರಾಲಜಿ ಸೈನ್ಸ್ಸ್ ಮತ್ತು ಅಂಗಾಗ ಕಸಿ ಸಂಸ್ಥೆಯ ಸ್ಥಾಪಕ ನಿರ್ದೇಶಕ ಡಾ.ಎನ್.ಎಸ್.ನಾಗೇಶ್ಗೆ ಇಂಡುವಾಳು ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ, ವಿದ್ಯಾರಣ್ಯಪುರಂನ ನೀಲಮ್ಮ ಅವರಿಗೆ ದೇವಮ್ಮ ಇಂಡುವಾಳು ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ ಹಾಗೂ ರಾಜ್ಯಮಟ್ಟದ ಕಬ್ಬಡಿ ಮಾಜಿ ಆಟಗಾರ ಹೆಚ್.ಕೆ.ಜಗದೀಶ್ ಚಂದ್ರ ಅವರಿಗೆ ಎಚ್.ಹೊನ್ನಪ್ಪ ಕ್ರೀಡಾ ಪ್ರಶಸ್ತಿ ಪ್ರದಾನ ಮಾಡಲಾಗುವುದು. 2024-25ನೇ ಸಾಲಿನ ಎಸ್ಎಸ್ಎಲ್ಸಿಯಲ್ಲಿ ಬೇವಿನಹಳ್ಳಿ, ಇಂಡುವಾಳು ಹಾಗೂ ಹುಲ್ಕೆರೆ ಕೊಪ್ಪಲು ಗ್ರಾಮದ ಅತಿ ಹೆಚ್ಚು ಅಂಕಗಳಿಸಿದ 4 ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಗುವುದು ಎಂದು ವಿವರಿಸಿದರು.
ಪ್ರಶಸ್ತಿ ಪುರಸ್ಕೃತರಿಗೆ ತಲಾ 25 ಸಾವಿರ ನಗದು, ಪ್ರಶಸ್ತಿ ಫಲಕ ಹಾಗೂ ವಿದ್ಯಾರ್ಥಿ ಪುರಸ್ಕೃತರಿಗೆ ತಲಾ 5 ಸಾವಿರ ನಗದು ಮತ್ತು ಪ್ರಮಾಣ ಪತ್ರ ನೀಡಲಾಗುವುದು ಎಂದು ಇದೇ ವೇಳೆ ತಿಳಿಸಿದರು.
ಗೋಷ್ಠಿಯಲ್ಲಿ ಕರ್ನಾಟಕ ಸಂಘದ ಅಧ್ಯಕ್ಷ ಡಾ.ಜಯಪ್ರಕಾಶ್ಗೌಡ, ನಿರ್ದೇಶಕ ಕೆ.ಜಯರಾಂ, ಹೊನ್ನಪ್ಪ ಅವರ ಪುತ್ರ ಡಾ.ಆದರ್ಶ ಇದ್ದರು.




