Friday, November 20, 2026

ಪ್ರಾಯೋಗಿಕ ಆವೃತ್ತಿ

ಒಳಮೀಸಲಾತಿ ಹಂಚಿಕೆಯಲ್ಲಿ ಅಲೆಮಾರಿಗಳಿಗೆ ಅನ್ಯಾಯ ; ಎನ್.ಮಹೇಶ್

ಒಳ ಮೀಸಲಾತಿ ಹಂಚಿಕೆಯಲ್ಲಿ ಅಲೆಮಾರಿ ಸೇರಿದಂತೆ ಅತಿ ಹಿಂದುಳಿದ ಸಮುದಾಯಗಳಿಗೆ ಅನ್ಯಾಯವಾಗಿದೆ. ಕೂಡಲೇ ಮೀಸಲಾತಿಗೆ ತಿದ್ದುಪಡಿ ತಂದು ಸರಿಪಡಿಸಲು ಸರ್ಕಾರ ಮುಂದಾಗಬೇಕು ಎಂದು ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್ ಆಗ್ರಹಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆಯ ಅಧಿವೇಶನ ಮುಗಿಯುವ ಕೊನೆ ವೇಳೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಶಿಷ್ಠ ಜಾತಿ ಸಮುದಾಯದ ಒಳಮೀಸಲಾತಿಗೆ ತಾರ್ಕಿಕ ಮತ್ತು ತಾತ್ವಿಕ ಅಂತ್ಯ ನೀಡುರುವುದಾಗಿ ಹೇಳಿಕೆ ನೀಡಿದ್ದಾರೆ. ಅದಕ್ಕೆ ಪೂರಕವಾಗಿ ಆ.25ರಂದು ಆದೇಶ ಹೊರಡಿಸಿದ್ದು, ಆದೇಶದಲ್ಲಿ ಯಾವುದೇ ತಾರ್ಕಿಕ ಮತ್ತು ತಾತ್ವಿಕ ಅಂಶಗಳು ಕಾಣುತ್ತಿಲ್ಲ ಎಂದರು.

ಅಲೆಮಾರಿ ಹಾಗೂ ಅರೆ ಅಲೆಮಾರಿ, ಅಸಹಾಯಕ ಮತ್ತು ದುರ್ಬಲ ಸಮುದಾಯಗಳನ್ನು ವಿಂಗಡಿಸಿರುವ ನಾಗಮೋಹನ್‌ದಾಸ್ ವರದಿಯಲ್ಲಿ ಶೇ.1ರಷ್ಟು ಮೀಸಲಾತಿ ನೀಡಿದ್ದರೂ. ಇತರೆ ಪ್ರಬಲ ವರ್ಗಗಳನ್ನು ಸೇರಿಸಿದ ರಾಜ್ಯ ಸರ್ಕಾರ ಮಹಾಮೋಸ ಎಸಗಿದೆ. ಇದು ತಾತ್ವಿಕ ಮತ್ತು ತಾರ್ಕಿಕ ಎಂಬುದು ಸರಿಯೇ ಎಂದು ಪ್ರಶ್ನಿಸಿದರು.

ನಾಗಮೋಹನ್‌ದಾಸ್ ವರದಿಯ ಶಿಫಾರಸ್ಸಿನ ತಿದ್ದುಪಡಿ ಮಾಡಿಕೊಂಡ ಕಾಂಗ್ರೆಸ್ ಸರ್ಕಾರ ಮೂರು ವರ್ಗಗಳನ್ನಾಗಿ ವಿಂಗಡಿಸಿಕೊAಡಿದೆ. ಶೇ 6, 6 ಮತ್ತು 5 ರಷ್ಟು ಮೀಸಲಾತಿ ವಿಂಗಡಿಸಿ, 101 ಜಾತಿಗಳ ಪೈಕಿ 98 ಜಾತಿಗಳನ್ನು ಮಾತ್ರ ತೋರಿಸಿದ್ದು, ಕಾನೂನು ಬದ್ಧ ಪರಿಶೀಲನೆಯಲ್ಲಿ ಸಮಸ್ಯೆ ಎದುರಾಗುತ್ತದೆ. ಅನುಚ್ಛೇತ 192ರ ಪ್ರಕಾರ ಜಾತಿಗಳನ್ನು ಸೇರಿಸಲು ಅಥವಾ ತೆಗೆಯಲು ಕೇಂದ್ರ ಸರ್ಕಾರಕ್ಕೆ ಹೊರತು ಪಡಿಸಿ ರಾಜ್ಯ ಸರ್ಕಾರಕ್ಕೆ ಅವಕಾಶವಿಲ್ಲ. ಈ ಸಂಬಂಧ ಯಾರಾದರೂ ನ್ಯಾಯಾಲಯದ ಮೆಟ್ಟಿಲೇರಿದರೆ, ಈ ಮೀಸಲಾತಿಗೆ ನ್ಯಾಯಾಲಯ ತಡೆ ನೀಡಲು ಇದೋಂದು ಕಾರಣ ಸಾಕಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕೂಡಲೇ ತಮ್ಮ ಆದೇಶಕ್ಕೆ ತಿದ್ದುಪಡಿ ತರಬೇಕು. ಇಲ್ಲವಾದಲ್ಲಿ ತಮ್ಮ ಆದೇಶ ಉರ್ಜಿತವಾಗಬಾರದೆಂದು ತಾವೇ ಬೇಕೆಂತಲೇ ಆದೇಶ ಮಾಡಿದಂತಾಗುತ್ತದೆ ಎಂದರು.

ಗೋಷ್ಠಿಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಪರಮಾನಂದ, ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಮಾಧ್ಯಮ ವಕ್ತಾರ ನಾಗಾನಂದ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ