ಮಳವಳ್ಳಿ ತಾಲೂಕು ಹಲಗೂರು ಗ್ರಾಮ ಪಂಚಾಯಿತಿ ಪಿಡಿಒ ಸಿ.ರುದ್ರಯ್ಯ ಅವರ ಮೇಲೆ ಕೇಳಿ ಬಂದಿರುವ ಕರ್ತವ್ಯಲೋಪ, ಹಣ ದುರುಪಯೋಗ ಹಾಗೂ ಅಕ್ರಮ ಖಾತೆ ಮಾಡಿದ ಆರೋಪಗಳ ತನಿಖೆಗೆ ನಿವೃತ್ತ ಜಿಲ್ಲಾ ನ್ಯಾಯಾಧೀಶ ಎಚ್.ಎಂ.ಶಿವಕುಮಾರಸ್ವಾಮಿ ಅವರನ್ನು ವಿಚಾರಣಾಧಿಕಾರಿಯಾಗಿ ನೇಮಿಸಿ ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಪಿಡಿಒ ಸಿ.ರುದ್ರಯ್ಯ ವಿರುದ್ಧ ಇಲಾಖಾ ವಿಚಾರಣೆ ನಡೆಸಲು, ಅವರ ವಿರುದ್ದ ಇಲಾಖಾ ವಿಚಾರಣೆ ಕೈಗೊಳ್ಳುವ ಸಂಬಂಧ ಮತ್ತೊಂದು ಮೊದಲನೇ ಕಾರಣ ಕೇಳಿ ನೋಟೀಸ್ ಜಾರಿಗೊಳಿಸುವ ಜತೆಗೆ ದೋಷಾರೋಪಣಾ ಪಟ್ಟಿಯನ್ನು ಜಾರಿ ಮಾಡಲಾಗಿದೆ. ಹೀಗಾಗಿ ಪಿಡಿಒ ರುದ್ರಯ್ಯ ಅವರು ಹಲಗೂರು ಗ್ರಾಮ ಪಂಚಾಯಿತಿಯಲ್ಲೇ ಇದ್ದರೆ ಇಲಾಖಾ ವಿಚಾರಣಾ ಆರೋಪಗಳಿಗೆ ಸಂಬಂಧಿಸಿದ ದಾಖಲೆಗಳನ್ನು ತಿದ್ದುಪಡಿ ಮಾಡುವ ಹಾಗೂ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಂಭವವಿರುವುದರಿಂದ ಅವರನ್ನು ನಿಡಘಟ್ಟ ಗ್ರಾ.ಪಂ. ಪಿಡಿಒ ಹುದ್ದೆಗೆ ನಿಯೋಜಿಸಲಾಗಿದೆ ಎಂದು ಜಿ.ಪಂ. ಸಿಇಒ ಶೇಖ್ ತನ್ವೀರ್ ಆಸಿಫ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.