ಮಂಡ್ಯ ನಗರದ ಖಾಸಗಿ ನರ್ಸಿಂಗ್ ಹೋಮ್ ಗಳಿಗೆ ಮಂಡ್ಯ ತಹಸಿಲ್ದಾರ್ ಅವರ ನೇತೃತ್ವದ ತಾಲ್ಲೂಕು ಮಟ್ಟದ ಅಧಿಕಾರಿಗಳ ತಂಡವು ಭೇಟಿ ನೀಡಿ ಗುರುವಾರ ಪರಿಶೀಲನೆ ನಡೆಸಿತು.
ಈ ಕುರಿತು ಮಾತನಾಡಿದ ಮಂಡ್ಯ ತಹಸೀಲ್ದಾರ್ ಶಿವಕುಮಾರ್ ಬಿರಾದಾರ್, ಮಂಡ್ಯ ನಗರದ ಕೃಪಾ ನರ್ಸಿಂಗ್ ಹೋಮ್, ರವಿ ನರ್ಸಿಂಗ್ ಹೋಮ್, ವಿನಾಯಕ ನರ್ಸಿಂಗ್ ಹೋಮ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ, ಪರಿಶೀಲನೆ ಸಂದರ್ಭದಲ್ಲಿ ನರ್ಸಿಂಗ್ ಹೋಮ್ ಗಳಲ್ಲಿ ಯಾವುದೇ ಲೋಪ ದೋಷಗಳು ಕಂಡು ಬಂದಿಲ್ಲ, ಮುಂದಿನ ದಿನಗಳಲ್ಲಿ ಖಾಸಗಿ ಸ್ಕ್ಯಾನಿಂಗ್ ಸೆಂಟರ್ ಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಇಒ ವೀಣಾ, ಟಿಎಚ್ಒ ಡಾ.ಜವರೇಗೌಡ, ಅರೋಗ್ಯ ಇಲಾಖೆ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು…