Wednesday, September 18, 2024

ಪ್ರಾಯೋಗಿಕ ಆವೃತ್ತಿ

ಜಾತಿಗಣತಿ ವರದಿ ಸಲ್ಲಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ ನೀಡಿದ ಸಿಎಂ

ಜಾತಿಗಣತಿ ವರದಿ ಸಲ್ಲಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ತಿಳಿಸಲಾಗಿದ್ದು, ವರದಿ ನೀಡಿದರೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹೆಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಕಾಂತರಾಜು ಅವರು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದು, ವರದಿ  ಸಿದ್ದಪಡಿಸಿದ್ದರು. ವರದಿ ಸಲ್ಲಿಸಲು ಹೋದಾಗ ಅದನ್ನು ಅವರು ಸ್ವೀಕರಿಸಲಿಲ್ಲ. ಆಗಿನ ಕಾರ್ಯದರ್ಶಿಗಳು ವರದಿಗೆ ಸಹಿ ಮಾಡಿಲ್ಲ ಎಂದು ಹೇಳಿದ್ದಾರೆ.

ಜಾತಿಗಣತಿ ಹಾಗೂ ಸಾಮಾಜಿಕ ಆರ್ಥಿಕ ಸಮೀಕ್ಷೆ ಮಾಡಬೇಕೆಂದು ನಾನು ಹಿಂದೆ ಆದೇಶ ಮಾಡಿದ್ದು, ಆಗ ಕಾಂತರಾಜು ಆವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದರು. ನಮ್ಮ ಸರ್ಕಾರದ ಅವಧಿಯಲ್ಲಿ ವರದಿ ಪೂರ್ಣವಾಗಿರಲಿಲ್ಲ. ಸಮ್ಮಿಶ್ರ ಸರ್ಕಾರ ಇರುವಾಗ ಅಂದಿನ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿ ಪುಟ್ಟರಂಗಶೆಟ್ಟಿ ಇದ್ದರು. ಆಗ ಅವರು ವರದಿಯನ್ನು  ಪಡೆಯಲಿಲ್ಲ ಎಂದು ಹೇಳಿದ್ದಾರೆ.

ಬಿಹಾರದಲ್ಲಿ ನಿನ್ನೆ ರಾಜ್ಯ ಸರಕಾರ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಿತ್ತು. ಪ್ರತಿಪಕ್ಷಗಳ INDIA ಒಕ್ಕೂಟ ವರದಿಯನ್ನು ಸ್ವಾಗತ ಮಾಡಿತ್ತು. ದೇಶದಲ್ಲೇ ಬಿಹಾರ ಜಾತಿಗಣತಿ ವರದಿ ಸಿದ್ಧಪಡಿಸಿದ ಮೊದಲ ರಾಜ್ಯವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಜಾತಿಗಣತಿ ವರದಿ ಬಿಡುಗಡೆ ಮಾಡುವಂತೆ ಆಗ್ರಹ ಕೇಳಿ ಬಂದಿತ್ತು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!