Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಅ.31ಕ್ಕೆ ಕಾರ್ಯನಿರತ ಪತ್ರಕರ್ತರ ಅಂತರ ಜಿಲ್ಲಾ ಸಮ್ಮೇಳನ

ಶ್ರೀಕ್ಷೇತ್ರ ಅದಿಚುಂಚನಗಿರಿ ಮಹಾಸಂಸ್ಥಾನ ಮಠ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮಂಡ್ಯ ಜಿಲ್ಲಾ ಘಟಕದ ಸಹಯೋಗದಲ್ಲಿ ಅ.31ರಂದು ಬೆಳಗ್ಗೆ 10 ಗಂಟೆಗೆ ಮಂಡ್ಯನಗರದ ಸುಮ ರವಿ ಕಲ್ಯಾಣ ಮಂಟಪದಲ್ಲಿ ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳ ಕಾರ್ಯನಿರತ ಪತ್ರಕರ್ತರ ಅಂತರ ಜಿಲ್ಲಾ ಸಮ್ಮೇಳನ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಸಿ.ಮಂಜುನಾಥ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ನಡೆಯಲಿರುವ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡ್ಯ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಸಿ. ಮಂಜುನಾಥ್ ವಹಿಸಲಿದ್ದಾರೆ ಎಂದು ತಿಳಿಸಿದರು.

ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಜೀವ ವಿಮಾ ಪಾಲಿಸಿಯ ಬಾಂಡ್‌ಗಳ ವಿತರಣೆ ಮಾಡಲಿದ್ದು, ಹಿರಿಯ ಪತ್ರಕರ್ತರಾದ ಎಚ್. ಆರ್.ರಂಗನಾಥ್ ಮತ್ತು ಸುದರ್ಶನ ಚೆನ್ನಂಗಿಹಳ್ಳಿ ಅವರು ಪತ್ರಕರ್ತರಿಗೆ ಹಿತನುಡಿ ನೀಡಲಿದ್ದಾರೆ. ಮುಖ್ಯಮಂತ್ರಿಗಳ ಕಾರ್ಯಾಲಯದ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಉಪಸ್ಥಿತರಿರುವರು. ರಾಜ್ಯ ಕಾರ್ಯದರ್ಶಿ ಮತ್ತಿಕೆರೆ ಜಯರಾಮ್ ಪ್ರಾಸ್ತಾವಿಕ ಭಾಷಣ ಮಾಡುವರು ಎಂದರು.

ಮುಖ್ಯ ಅತಿಥಿಗಳಾದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ, ಪಿ.ರವಿಕುಮಾರ್ ಗಣಿಗ, ರಮೇಶ್ ಬಾಬು ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ, ವಾರ್ತಾ ಮತ್ತು ಸಂಪರ್ಕ ಇಲಾಖೆಯ ಕಾರ್ಯದರ್ಶಿ ಎನ್. ಜಯರಾಮ್, ಸಂಘದ ರಾಜ್ಯ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು, ರಾಷ್ಟ್ರೀಯ ಸಮಿತಿ ಅಧ್ಯಕ್ಷ ಎಚ್.ಬಿ. ಮದನ್‌ಗೌಡ, ಸದಸ್ಯ ಪಿ.ಜೆ.ಚೈತನ್ಯ ಕುಮಾರ್, ಕಾಂಗ್ರೆಸ್ ಮುಖಂಡರಾದ ವಿಜಯ್ ರಾಮೇಗೌಡ, ರವಿ ಬೋಜೇಗೌಡ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಶೇಖ್ ತನ್ವೀರ್ ಆಸಿಫ್ ಭಾಗವಹಿಸಲಿದ್ದಾರೆ ಎಂದರು.

ಕೃಷಿ ಉಪನ್ಯಾಸ 

ಬೆಳಗ್ಗೆ 11 ಗಂಟೆಗೆ ಕೃಷಿ ಕುರಿತ ಉಪನ್ಯಾಸ ನಡೆಯಲಿದ್ದು, ಜನತಾ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಕೆ.ಎಸ್. ವಿಜಯ್ ಆನಂದ್ ಉದ್ಘಾಟಿಸುವರು. ಬಾಗಲಕೋಟೆ ತೋಟಗಾರಿಕೆ ಇಲಾಖೆ ಮತ್ತು ಕೃಷಿ ಕಾಲೇಜು ನಿವೃತ್ತ ರಿಜಿಸ್ಟçರ್ ಎ.ಬಿ.ಪಾಟೀಲ್ ಅವರು ವಿಷಯ ಮಂಡನೆ ಮಂಡಿಸಲಿದ್ದು, ವಿಷಯ ಮಂಡನೆಯನ್ನು ರಾಣಿ ಚಂದ್ರಶೇಖರ್ ಪ್ರಸ್ತಾವನೆ ಮಾಡುವರು ಎಂದರು.

ಮಾಧ್ಯಮ ಉಪನ್ಯಾಸ

ಮಧ್ಯಾಹ್ನ 3 ಗಂಟೆಗೆ ಮಾಧ್ಯಮ ಕ್ಷೇತ್ರದಲ್ಲಿ ಮೌಲ್ಯವೃದ್ಧಿಯಲ್ಲಿ ಪತ್ರಕರ್ತರ ಪಾತ್ರ ಕುರಿತು ಮಾಧ್ಯಮ ಉಪನ್ಯಾಸ ನಡೆಯಲಿದ್ದು, ಪತ್ರಕರ್ತ ಕೆ.ಎನ್. ಚನ್ನೇಗೌಡ ಉದ್ಘಾಟಿಸಿ ವಿಷಯ ಮಂಡನೆ ಮಾಡುವರು. ಸಂಘದ ರಾಜ್ಯ ಕರ‍್ಯದರ್ಶಿ ಜಿ.ಸಿ. ಲೋಕೇಶ್, ಪತ್ರಕರ್ತ ಕೆ. ನರಸಿಂಹಮೂರ್ತಿ ವಿಷಯ ಮಂಡನೆ ಮಾಡುವರು ಎಂದು ತಿಳಿಸಿದರು.

ಸಮಾರೋಪ

ಸಂಜೆ 4 ಗಂಟೆಗೆ ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ.ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಸಂಘದ ಜಿಲ್ಲಾಧ್ಯಕ್ಷ ಕೆ.ಸಿ. ಮಂಜುನಾಥ್ ಅಧ್ಯಕ್ಷತೆ ವಹಿಸುವರು. ಪತ್ರಕರ್ತ ಕೆ.ಎನ್. ಚನ್ನೇಗೌಡ ಸಮಾರೋಪ ನುಡಿಯನ್ನಾಡುವರು. ಹಿರಿಯ ಪತ್ರಕರ್ತ ಪಿ. ರಾಮಯ್ಯ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರನ್ನು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅಭಿನಂದಿಸುವರು ಎಂದರು.

ಶಾಸಕ ಎಚ್.ಟಿ. ಮಂಜು, ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು, ಡಿ.ಸಿ. ತಮ್ಮಣ್ಣ, ಮಾಜಿ ಶಾಸಕರಾದ ಎ.ಎಸ್. ರವೀಂದ್ರ ಶ್ರೀಕಂಠಯ್ಯ, ಸುರೇಶ್‌ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ. ಉಮೇಶ್, ಮನ್‌ಮುಲ್ ಮಾಜಿ ಅಧ್ಯಕ್ಷ ಬಿ.ಆರ್. ರಾಮಚಂದ್ರ ಇತರರು ಭಾಗವಹಿಸುವರು ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಸಂಘದ ರಾಜ್ಯ ನಿರ್ದೇಶಕ ಸಿ.ಎನ್. ಮಂಜುನಾಥ್, ಜಿಲ್ಲಾ ಪ್ರಧಾನ ಕರ‍್ಯದರ್ಶಿ ಕೆ.ಎನ್. ನವೀನ್‌ಕುಮಾರ್, ಉಪಾಧ್ಯಕ್ಷ ರವಿ ಸಾವಂದಿಪುರ, ಕಾರ‍್ಯದರ್ಶಿ ಮಂಜುಳಾ, ಖಜಾಂಚಿ ನಂಜುಂಡಸ್ವಾಮಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!